ಬಿಜೆಪಿಯಲ್ಲಿ ಬಿಎಸ್ ವೈ ಕಡೆಗಣನೆ ಮಾಡಿದರೆ ಎಚ್ಚರಿಕೆ : ರಾಜ್ಯಾಧ್ಯಕ್ಷರಿಗೆ ಪತ್ರ
Team Udayavani, Sep 27, 2019, 12:37 PM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ.
ಯಡಿಯೂರಪ್ಪನವರು ಸಂಘಟನೆಯನ್ನ ತಮ್ಮ ಸ್ವರ್ಥಕ್ಕೆ ಬಳಸಿಕೊಳ್ಳುತ್ತಿದ್ದವರನ್ನ ಮುಲಾಜಿಲ್ಲದೆ ಹೊರಗಿಟ್ಟು ಪಕ್ಷ ಸಂಘಟನೆ ಮಾಡಿದ್ದಾರೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಮಟ್ಟಿನ ಸಾಧನೆ ಮಾಡಲು ಬಿ ಎಸ್ ಯಡಿಯೂರಪ್ಪ ಅವರು ಕಾರಣ. ಅವರನ್ನು ಕಡೆಗಣನೆ ಮಾಡಿದರೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರು ಸುಮ್ಮನಿರಲ್ಲ ಎಂದು ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ.
ಬಿ ವೈ ವಿಜಯೇಂದ್ರ ಅವರನ್ನೂ ತುಳಿಯುವ ಪ್ರಯತ್ನಗಳು ಪಕ್ಷದಲ್ಲಿ ನಡೆಯುತ್ತಿವೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಕೊಡುತ್ತಾರೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಸುರಾನಾ ಹಾಗೂ ಭಾನುಪ್ರಕಾಶ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಈ ಅಸಮಾಧಾನ ಭುಗಿಲೆದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.