ಪ್ರತಿ ತಾಲೂಕಿಗೊಂದು ವೀರಶೈವ ಲಿಂಗಾಯತ ವಿದ್ಯಾರ್ಥಿ ವಸತಿ ನಿಲಯ: ಈಶ್ವರ ಖಂಡ್ರೆ
Team Udayavani, Sep 27, 2019, 5:45 PM IST
ಬೀದರ: ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಈಗಾಗಲೇ ಬೆಂಗಳೂರಿನಲ್ಲಿ ಉಚಿತ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಐಎಎಸ್, ಕೆಎಎಸ್ ತರಬೇತಿಗಾಗಿ ತರಬೇತಿ ಕೇಂದ್ರವನ್ನೂ ಆರಂಭಿಸಲಾಗಿದೆ. ಇದೀಗ ವೀರಶೈವ ಲಿಂಗಾಯತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿ ತಾಲ್ಲೂಕಿಗೊಂದು ವಿದ್ಯಾರ್ಥಿ ವಸತಿ ನಿಲಯ ಸ್ಥಾಪಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಹೇಳಿದರು.
ನಗರದ ವಿದ್ಯಾನಗರ ಕಾಲೊನಿಯ ಶ್ರೀಮತಿ ಲಕ್ಷ್ಮೀ ಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದಲ್ಲಿ 2018-19ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಹಾನಗಲ್ ಕುಮಾರಶಿವಯೋಗಿಗಳ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೌಲ್ಯಯುತ ಶಿಕ್ಷಣದ ಕೊರತೆಯೇ ಪ್ರಸ್ತುತ ಸಮಾಜದಲ್ಲಿ ಅನ್ಯಾಯ, ಅನೀತಿ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕಾರಣವಾಗಿದೆ. ವ್ಯಸನಗಳಿಗೆ ದಾಸರಾಗಿ ಮಕ್ಕಳೇ ತಂದೆ ತಾಯಿಯನ್ನು ಕೊಲೆ ಮಾಡುತ್ತಿರುವ ಪ್ರಕರಣಗಳು ಬೇಸರ ಉಂಟು ಮಾಡುತ್ತಿವೆ. ಮಕ್ಕಳಿಗೆ ಮಾನವೀಯ ಹಾಗೂ ನೈತಿಕ ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಇಂದಿನ ಮಕ್ಕಳಿಗೆ ಅವಶ್ಯಕತೆಯಾಗಿದೆ. ವಚನ ಸಾಹಿತ್ಯದ ಅಧ್ಯಯನದಿಂದ ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸಬಹುದಾಗಿದೆ ಎಂದು ಸಲಹೆ ಮಾಡಿದರು.
ಮಹಾಸಭಾ ಬೀದರ್ ಜಿಲ್ಲಾ ಘಟಕ ಹಲವು ವರ್ಷಗಳಿಂದ ಪ್ರತಿಭಾ ಪುರಸ್ಕಾರದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ. ವಿವಿಧ ಕ್ಷೇತ್ರಗಳ ಸಾಧಕರನ್ನೂ ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿದೆ. ಇಡೀ ರಾಜ್ಯದಲ್ಲಿ ಬೀದರ ಜಿಲ್ಲೆಯ ಸಂಘಟನೆ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.