ಕೊಡಗು ಮಾದರಿ ನೆರೆ ಪರಿಹಾರಕ್ಕೆ ಜಿಪಂ ನಿರ್ಣಯ

ಅಧ್ಯಕ್ಷರಿಗೆ ಬಿಸಿ ಮುಟ್ಟಿಸಿದ ಮಾಜಿ ಅಧ್ಯಕ್ಷೆ ಚೈತ್ರಾನೆರೆಹಾನಿ ಸಮೀಕ್ಷೆ ಅಸಮರ್ಪಕ ಆರೋಪ-ಪುನರ್‌ ಸಮೀಕ್ಷೆಗೆ ಆಗ್ರಹ 30ಕ್ಕೆ ಸಭೆ ಮುಂದೂಡಿಕೆ

Team Udayavani, Sep 28, 2019, 1:21 PM IST

28-Sepctember-14

ಧಾರವಾಡ: ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೊಳಗಾದ ಮನೆಗಳಿಗೆ ಕೊಡಗು ಮಾದರಿಯಲ್ಲೇ ಪರಿಹಾರ ನೀಡುವಂತೆ ಆಗ್ರಹಿಸಿ ಜಿಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಿ, ಸರಕಾರಕ್ಕೆ ಕಳಿಸಲು ತೀರ್ಮಾನಿಸಲಾಯಿತು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಅಧ್ಯಕ್ಷೆಯಲ್ಲಿ ಜರುಗಿದ ಸಭೆಯಲ್ಲಿ ಅತಿವೃಷ್ಟಿ ಹಾನಿಯ ಸಮೀಕ್ಷೆ ಕುರಿತು ಸುದೀರ್ಘ‌ ಚರ್ಚೆ ನಡೆಸಿದ ಸದಸ್ಯರು, ಕೊಡಗಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಿದ ಮಾದರಿಯಲ್ಲಿಯೇ ಜಿಲ್ಲೆಯಲ್ಲಿಯೂ ಪರಿಹಾರ ನೀಡಲು ಒತ್ತಾಯಿಸಿ ನಿರ್ಣಯ ಕೈಗೊಂಡರು.

ಇದಕ್ಕೂ ಮುನ್ನ ನೆರೆಹಾವಳಿ ಕುರಿತು ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಮಾಜಿ ಅಧ್ಯಕ್ಷೆ ಚೈತ್ರಾ ಶಿರೂರ, ಕಲ್ಲಪ್ಪ ಪುಡಕಲಕಟ್ಟಿ, ಚೆನ್ನಬಸಪ್ಪ ಮಟ್ಟಿ ಸೇರಿದಂತೆ ಪಕ್ಷಬೇಧ ಮರೆತು ಎಲ್ಲಾ ಸದಸ್ಯರು ಒಮ್ಮತದಿಂದ ಕೊಡಗು ಮಾದರಿಯಲ್ಲೇ ಜಿಲ್ಲೆಯಲ್ಲಿ ಹಾನಿಗೆ ಒಳಗಾದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು.

ಧಾರವಾಡ ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ್‌ ಮಾತನಾಡಿ, ನೆರೆಯಿಂದ ಮನೆಗಳಿಗೆ ಉಂಟಾಗಿರುವ ಹಾನಿ ಪರಿಹಾರಕ್ಕೆ 66 ಕೋಟಿ ರೂ. ಅಗತ್ಯವಿದೆ. ಬೇರೆ ಯೋಜನೆಗಳಡಿ 9 ಕೋಟಿ ರೂ.ಲಭ್ಯವಿದ್ದು, ಸರ್ಕಾರದಿಂದ ಗುರುವಾರವಷ್ಟೇ 55 ಕೋಟಿ ರೂ. ಬಿಡುಗಡೆಯಾಗಿದೆ. 1 ಲಕ್ಷ 53 ಸಾವಿರ ಹೆಕ್ಟೇರ್‌ ಕೃಷಿ ಬೆಳೆ ಹಾಗೂ 32,358 ಹೆಕ್ಟೇರ್‌ ತೋಟಗಾರಿಕೆ ಬೆಳೆ ಸೇರಿ ಒಟ್ಟು 125 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿರುವ ಬಗ್ಗೆ ಅಂದಾಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಕಲ್ಲಪ್ಪ ಪುಡಕಲಕಟ್ಟಿ, ಚೈತ್ರಾ ಶಿರೂರ, ನಿಂಗಪ್ಪ ಘಾಟಿನ್‌, ಚನ್ನಬಸಪ್ಪ ಮಟ್ಟಿ, ಉಮೇಶ ಹೆಬಸೂರ ಮೊದಲಾದ ಸದಸ್ಯರು ಮಾತನಾಡಿ, ಅತಿವೃಷ್ಟಿ ಹಾನಿಯ ಬಗ್ಗೆ ಸರಿಯಾಗಿ ಸಮೀಕ್ಷೆ ಆಗಿಲ್ಲ. ಹೀಗಾಗಿ ಮರುಸಮೀಕ್ಷೆ ಕೈಗೊಳ್ಳಬೇಕು. ಪರಿಹಾರ ಕಾರ್ಯದಲ್ಲಿ ಜಿಪಂ ಕೂಡ ಪಾಲುದಾರವಾದರೆ ನೇರವಾಗಿ ಗ್ರಾಮೀಣ ಜನರ ಅಹವಾಲುಗಳಿಗೆ ಚುನಾಯಿತ ಪ್ರತಿನಿಧಿಗಳು ಸ್ಪಂದಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಎಸಿ ಮಹ್ಮದ್‌ ಜುಬೇರ್‌, ಅತಿವೃಷ್ಟಿ ಹಾನಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ ಎಂಬ ನಿರ್ದಿಷ್ಟವಾದ ಪ್ರಕರಣಗಳನ್ನು ಜಿಪಂ ಸದಸ್ಯರು ನೀಡಿದರೆ ಆ ಮನೆಗಳ ಹಾನಿಯ ಬಗ್ಗೆ ಮರುಸಮೀಕ್ಷೆ ಮಾಡಲು ಜಿಲ್ಲಾಡಳಿತ ಸಿದ್ಧವಿದೆ. ಮತ್ತೊಂದು ತಂಡ ರಚಿಸಿ ಸಮೀಕ್ಷೆ ಮಾಡಲಾಗುವುದು ಎಂದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ಅತಿವೃಷ್ಟಿಯಿಂದ ಮನೆಗಳಿಗೆ ನೀರು ನುಗ್ಗಿ ಪಾತ್ರೆ, ಬಟ್ಟೆ ಕಳೆದುಕೊಂಡವರಿಗೆ ತಕ್ಷಣದ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ ತಲಾ ಹತ್ತು ಸಾವಿರ ರೂ. ಒದಗಿಸಲಾಗಿದೆ. ಬೆಳೆವಿಮೆ ಹಣ ಪಡೆದ ಕಂಪೆನಿಗಳ ಅಧಿಕಾರಿಗಳನ್ನು ಜಿಪಂ ಸಾಮಾನ್ಯ ಸಭೆಗೆ ಕರೆಯಿಸಿ ಸದಸ್ಯರಿಗೆ ಸಮರ್ಪಕ ಮಾಹಿತಿ ಒದಗಿಸಲಾಗುವುದು ಎಂದು ಹೇಳಿದರು. ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿಪಂ ಉಪ ಕಾರ್ಯದರ್ಶಿ ಎಸ್‌.ಜಿ. ಕೊರವರ ಮತ್ತಿತರರಿರು.

ಟಾಪ್ ನ್ಯೂಸ್

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

1

India: 68 ಮಿಲಿಯನ್‌ ಟನ್‌ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-uv-fusion

Bamboo: ಬಿದಿರು ಎಂದು ಮೂಗು ಮುರಿಯದಿರಿ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Kukke Shree Subrahmanya Temple: ಮೂಲ ಮೃತ್ತಿಕಾ ಪ್ರಸಾದ ವಿತರಣೆ

4

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

man-a

Udupi: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.