ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಕ್ಷಣಗಣನೆ

Team Udayavani, Sep 29, 2019, 3:00 AM IST

vishvavik

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ದೇವಾಲಯದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಭಾನುವಾರ ಬೆಳಗ್ಗೆ 9.39 ರಿಂದ 10.25ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡದೇವತೆ ಚಾಮುಂಡಿ ದೇವಿಯ ಅಗ್ರಪೂಜೆ ಯೊಂದಿಗೆ 2019ರ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಸರಸ್ವತಿ ಸಮ್ಮಾನ್‌ ಪುರಸ್ಕೃತ ಹಿರಿಯ ಸಾಹಿತಿ ಪದ್ಮಶ್ರೀ ಡಾ.ಎಸ್‌.ಎಲ್‌.ಭೈರಪ್ಪ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.

ಚಾಮುಂಡಿಬೆಟ್ಟದಲ್ಲಿ ದೇವಾಲಯದ ಸಮೀಪದ ಆವರಣದಲ್ಲಿ ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭಕ್ಕಾಗಿ ವೇದಿಕೆ ನಿರ್ಮಿಸಲಾಗಿದ್ದು, 45 ಮಂದಿ ಗಣ್ಯರು ಆಸೀನರಾಗಲು ವೇದಿಕೆ ಸಿದ್ದಪಡಿಸಲಾಗಿದೆ. ಅಲ್ಲದೆ ಸಮಾರಂಭ ವೀಕ್ಷಿಸಲು 300 ಗಣ್ಯರು ಹಾಗೂ 800 ಮಂದಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಈಗಾಗಲೆ ಬಿಗಿ ಭದ್ರತೆಗೆ ನಿಯೋಜಿಸಲಾಗಿರುವ ಪೊಲೀಸರು ಶನಿವಾರವೇ ಚಾಮುಂಡಿಬೆಟ್ಟದಲ್ಲಿ ಬೀಡು ಬಿಟ್ಟಿದ್ದು, ಭದ್ರತಾ ಕಾರ್ಯ ನಡೆಸುತ್ತಿದ್ದಾರೆ.

ಬೆಳ್ಳಿಯ ರಥದಲ್ಲಿ ದೇವಿ ಪ್ರತಿಷ್ಠಾಪನೆ: ದಸರಾ ಮಹೋತ್ಸವದ ಉದ್ಘಾಟನೆಯನ್ನು ಪ್ರತಿ ವರ್ಷದಂತೆ ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ನಾಳೆ ಚಾಲನೆ ನೀಡಲಾಗುತ್ತದೆ. ಇದಕ್ಕಾಗಿ ದೇವಾಲಯದ ಬೆಳ್ಳಿ ರಥವನ್ನು ವೇದಿಕೆಯ ಬಳಿ ನಿಲ್ಲಿಸಲಾಗಿದೆ. ಚಿಕ್ಕದಾಗಿರುವ ಬೆಳ್ಳಿ ರಥದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನಿಟ್ಟು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ರಥವನ್ನು ಶನಿವಾರ ಮಧ್ಯಾಹ್ನವೇ ವೇದಿಕೆಯ ಬಳಿ ತಂದು ನಿಲ್ಲಿಸಲಾಗಿದೆ.

ದೇವಾಲಯದಲ್ಲಿ ಪೂಜೆ: ನವರಾತ್ರಿಯ ಆರಂಭದ ದಿನವಾದ ಭಾನುವಾರ ಮುಂಜಾನೆ 4.30ರಿಂದಲೇ ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರಧಾನ ಆಗಮಿಕ ಡಾ.ಎನ್‌.ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿವೆ. ಬೆಳಗ್ಗಿನಿಂದಲೇ ಮಹಾನ್ಯಾಸಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ನಡೆಯುತ್ತವೆ. ಒಂಭತ್ತು ದಿನವೂ ವಿವಿಧ ಪೂಜಾ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ. 4.30ರಿಂದ 5.30ರವರೆಗೆ ಮಹಾಬಲೇಶ್ವರ ದೇವಾಲಯ ಮುಂಭಾಗ ಇರುವ ದರ್ಬಾರ್‌ ಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆದರ್ಬಾರ್‌ ಉತ್ಸವ ನೆರವೇರಲಿದೆ.

ದಸರಾ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ಒಂಭತ್ತು ದಿನವೂ ಬೇರೆ ಬೇರೆ ಅಲಂಕಾರ ಮಾಡಲಾಗುತ್ತದೆ. ಮೊದಲ ದಿನವಾದ ಭಾನುವಾರ (ಸೆ.29) ಚಾಮುಂಡೇಶ್ವರಿಗೆ ಬ್ರಾಹ್ಮಿ ಅಲಂಕಾರ, ಸೆ.30ರಂದು ಮಹೇಶ್ವರಿ ಅಲಂಕಾರ, ಅ.1ರಂದು ಕೌಮಾರಿ, ಅ.2ರಂದು ವೈಷ್ಣವಿ, ಅ.3ರಂದು ವಾರಾಹಿ, ಅ.4ರಂದು ಇಂದ್ರಾಣಿ ಅಲಂಕಾರವಿರುತ್ತದೆ. ಅ.5ರಂದು ಸರಸ್ವತಿ ಅಲಂಕಾರ, ಅಂದು ಸಂಜೆ ಕಾಳರಾತ್ರಿ ಪೂಜೆ ನಡೆಯುತ್ತದೆ. ಅ.6ರಂದು ದುರ್ಗಾ ಅಲಂಕಾರ, ಅ.7ರಂದು ಗಜಲಕ್ಷ್ಮೀ, ಅ.8ರಂದು ಅಶ್ವಾರೋಹಣ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಪ್ರತಿ ದಿನ ಬೆಳಗ್ಗೆ 7.30 ರಿಂದ 2 ಗಂಟೆ, ಮಧ್ಯಾಹ್ನ 3.30ರಿಂದ 6ಗಂಟೆ ಹಾಗೂ ಸಂಜೆ.7.30ರಿಂದ ರಾತ್ರಿ 9ಗಂಟೆಯವರೆಗೆ ಭಕ್ತರು ದೇವಿಯ ದರ್ಶನ ಪಡೆಯವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಚಿನ್ನದ ಅಂಬಾರಿಯಲ್ಲಿ ಉತ್ಸವ ಮೂರ್ತಿ: ಚಾಮುಂಡಿಬೆಟ್ಟದಲ್ಲಿ ಭಾನುವಾರ ಗಣ್ಯರು ಪುಷ್ಪಾರ್ಚನೆ ಮಾಡಲಿರುವ ಚಾಮುಂಡೇಶ್ವರಿ ವಿಗ್ರಹ ಅರಮನೆಯಿಂದ ತಂದು, ಚಾಮುಂಡಿಬೆಟ್ಟದ ದೇವಾಲಯದಲ್ಲಿಡಲಾಗಿದೆ. ಪ್ರತಿ ವರ್ಷ ದಸರಾ ಮಹೋತ್ಸವದ ಆರಂಭಕ್ಕೆ ಮೂರು ದಿನ ಮೊದಲೇ ಅರಮನೆಯಿಂದ ಚಾಮುಂಡಿಬೆಟ್ಟಕ್ಕೆ ತರಲಾಗುತ್ತದೆ. ನಂತರ ಉತ್ಸವ ಮೂರ್ತಿಯನ್ನು ತೊಳೆದು, ನೈವೇದ್ಯ ಮಾಡಿ, ಪೂಜೆ ಸಲ್ಲಿಸುವ ಮೂಲಕ ಶಕ್ತಿ ತುಂಬಲಾಗುತ್ತದೆ. ನಾಳೆಯಿಂದ ಅ.8ರವರೆಗೂ ಚಾಮುಂಡಿಬೆಟ್ಟದ ದೇವಾಲಯದಲ್ಲಿ ಪೂಜಿಸಲಾಗುತ್ತದೆ. ಜಂಬೂಸವಾರಿಯ ದಿನ ಬೆಳಗ್ಗೆ ಉತ್ಸವ ಮೂರ್ತಿಯನ್ನು ಅರಮನೆಗೆ ತಂದು ಒಪ್ಪಿಸಲಾಗುತ್ತದೆ. ನಂತರ ಚಿನ್ನದ ಅಂಬಾರಿಯಲ್ಲಿಟ್ಟು ಜಂಬೂಸವಾರಿಯಲ್ಲಿ ಮೆರವಣಿಗೆ ಮಾಡಲಾಗುತ್ತದೆ. ಜಂಬೂಸವಾರಿಯ ನಂತರ ಉತ್ಸವ ಮೂರ್ತಿಯನ್ನು ಅರಮನೆಯಲ್ಲಿಟ್ಟು ವರ್ಷವಿಡೀ ಪೂಜಿಸಲಾಗುತ್ತದೆ.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.