ವನಿತಾ ಏಕದಿನ ತಂಡಕ್ಕೆ ಸುಷ್ಮಾ ವರ್ಮ
ವೆಸ್ಟ್ ಇಂಡೀಸ್ ಕ್ರಿಕೆಟ್ ಪ್ರವಾಸ
Team Udayavani, Sep 29, 2019, 5:55 AM IST
ಹೊಸದಿಲ್ಲಿ: ವರ್ಷಾಂತ್ಯ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿರುವ ಭಾರತೀಯ ವನಿತಾ ಕ್ರಿಕೆಟ್ ತಂಡಗಳನ್ನು ಪ್ರಕಟಿಸಲಾಗಿದ್ದು, ವಿಕೆಟ್ ಕೀಪರ್ ಸುಷ್ಮಾ ವರ್ಮ ಅವರನ್ನು ಏಕದಿನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ತಂಡವನ್ನು ಮಿಥಾಲಿ ರಾಜ್ ಮುನ್ನಡೆಸಲಿದ್ದಾರೆ. ಟಿ20 ತಂಡಕ್ಕೆ ಹರ್ಮನ್‌ಪ್ರೀತ್ ಕೌರ್ ನಾಯಕಿಯಾಗಿದ್ದಾರೆ.
ನವೆಂಬರ್‌ನಲ್ಲಿ ಆರಂಭವಾಗಲಿರುವ ಕೆರಿಬಿಯನ್ ಸರಣಿಯಲ್ಲಿ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಾಗುವುದು. ಮೊದಲ ಏಕದಿನ ಪಂದ್ಯ ನ. ಒಂದರಂದು ಆ್ಯಂಟಿಗುವಾದಲ್ಲಿ ನಡೆಯಲಿದೆ. ಟಿ20 ಪಂದ್ಯಗಳ ತಾಣ ಸೇಂಟ್ ಲೂಸಿಯಾ ಮತ್ತು ಗಯಾನಾ.
ಇತ್ತೀಚೆಗೆ ತವರಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲಿ ರುವ ಏಕದಿನ ತಂಡಕ್ಕೆ ಸುಷ್ಮಾ ವರ್ಮ ಅವರನ್ನಷ್ಟೇ ಸೇರಿಸಿ ವಿಂಡೀಸ್ ಪ್ರವಾಸಕ್ಕೆ 16 ಸದಸ್ಯರ ಬಳಗವನ್ನು ಅಂತಿಮಗೊಳಿಸಲಾಗಿದೆ. ಟಿ20 ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಏಕದಿನ ತಂಡ
ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮತಿ ಮಂಧನಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮ, ಪೂನಂ ರಾವತ್, ಡಿ. ಹೇಮಲತಾ, ಜೂಲನ್ ಗೋಸ್ವಾಮಿ, ಶಿಖಾ ಪಾಂಡೆ, ಮಾನ್ಸಿ ಜೋಶಿ, ಪೂನಂ ರಾವತ್, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್, ತನಿಯಾ ಭಾಟಿಯಾ, ಪ್ರಿಯಾ ಪೂನಿಯಾ, ಸುಷ್ಮಾ ವರ್ಮ.
ಟಿ20 ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ (ಉಪನಾಯಕಿ), ಜೆಮಿಮಾ ರೋಡ್ರಿಗಸ್, ಶಫಾಲಿ ವರ್ಮ, ಹಲೀìನ್ ದೇವಲ್, ದೀಪ್ತಿ ಶರ್ಮ, ತನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ವೇದಾ ಕೃಷ್ಣಮೂರ್ತಿ, ಅನುಜಾ ಪಾಟೀಲ್, ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್, ಮಾನ್ಸಿ ಜೋಶಿ, ಅರುಂಧತಿ ರೆಡ್ಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.