ನೆರೆ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಿ


Team Udayavani, Sep 29, 2019, 10:39 AM IST

bk-tdy-3

ಮುಧೋಳ: ಜಿಲ್ಲೆಯಲ್ಲಿ ಸಂಭವಿಸಿದ ನೆರೆಹಾವಳಿಯಿಂದ ಹಲವಾರು ಗ್ರಾಮಗಳು ಮುಳುಗಡೆಯಾಗಿ ಜನರು ಬೀದಿಗೆ ಬಿದ್ದಿದ್ದಾರೆ. ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಿ, ಸಂತ್ರಸ್ತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿಎಸ್‌ಎಸ್‌(ಭೀಮವಾದ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ರನ್ನ ಸರ್ಕಲ್‌ನಿಂದ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಡಿಎಸ್‌ಎಸ್‌ ರಾಜ್ಯ ಸಂಘಟನಾ ಸಂಚಾಲಕ ಪರಶುರಾಮ ನೀಲನಾಯಕ ಮಾತನಾಡಿ, ನೆರೆ ಸಂತ್ರಸ್ತರ ನ್ಯಾಯಕ್ಕಾಗಿ ಜಿಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಜಿಲ್ಲಾ ಬಂದ್‌ ಮಾಡುವ ಬದಲು ಉಪಮುಖ್ಯಮಂತ್ರಿಗಳ ಮನೆಗೆ

ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು. ಅಧಿಕಾರಿಗಳ ಒತ್ತಡದಿಂದ ಕೈಬಿಟ್ಟರೂ ಸರ್ಕಾರ ಗಮಹರಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಶಾಸಕರ ಮನೆ ಎದುರು ಶೆಡ್‌ ಹಾಕಿಕೊಂಡು ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.

ತಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಗೋವಿಂದ ಕಾರಜೋಳರವರು ರಾಜ್ಯಕ್ಕೆ ಉಪಮುಖ್ಯಮಂತ್ರಿಗಳಾಗಿದ್ದು ಅವರು ಕೇವಲ ಒಂದು ಸಮಾಜಕ್ಕೆ ಮಾತ್ರ ಸೀಮಿತರಲ್ಲ. ಹೋರಾಟ ಮಾಡಲು ಎಲ್ಲರಿಗೂ ಸಮಾನ ಹಕ್ಕಿದೆ ಎಂದು ತಮ್ಮ ಹೋರಾಟವನ್ನು ಹತ್ತಿಕ್ಕುವ ಹೇಳಿಕೆಗಳಿಗೆ ತಿರುಗೇಟು ನೀಡಿದರು.

ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗದ ವರದಿಯನ್ನು ಶಾಸನ ಸಭೆಯಲ್ಲಿ ಮಂಡಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದು. ಕೂಡಲೇ ಪಿಟಿಸಿಎಲ್‌ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ತರಬೇಕು, ರಾಜ್ಯ ಸರ್ಕಾರ ಎಸ್‌.ಸಿ. ಸಮುದಾಯಕ್ಕೆ ಶೇ. 15 ದಿಂದ ಶೇ. 17.5, ಎಸ್‌.ಟಿ. ಸಮುದಾಯಕ್ಕೆ ಶೇ. 7.5 ಮೀಸಲಾತಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಬಾಲಕಿಯರ ಕೊಲೆ ಪ್ರಕರಣ ಖಂಡಿಸಿ, ಕೊಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು. ಬಾಲಕಿಯರ ಕುಟುಂಬಗಳಿಗೆ ವಿಶೇಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ ಸಂಜಯ ಇಂಗಳೆ ಅವರಿಗೆ ಮನವಿ ಸಲ್ಲಿಸಿದರು.

ಪಡಿಯಪ್ಪ ಕಳ್ಳಿಮನಿ, ಯಮನಪ್ಪ ಗುಣದಾಳ, ಸತೀಶ ಗಾಡಿ, ಪ್ರಕಾಶ ಮಾಂಗ, ರವಿ ಮಾಚಕನೂರ, ಸುರೇಶ ನಡುವಿನಮನಿ, ವಿಠಲ ಮಿರ್ಜಿ, ಯಲ್ಲಪ್ಪ ತಳಗೇರಿ, ವಿಠಲ ತಳಗೇರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.