ದಸರಾ ಧರ್ಮ ಸಮ್ಮೇಳನಕ್ಕೆ ಸಜ್ಜು
ಇಂದಿನಿಂದ ಶ್ರೀ ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ ಅದ್ದೂರಿ ಮಹೋತ್ಸವ
Team Udayavani, Sep 29, 2019, 11:17 AM IST
ದಾವಣಗೆರೆ: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ 10 ದಿನಗಳ ನಡೆಯಲಿರುವ 28ನೇ ದಸರಾ ದರ್ಬಾರ್‌ಗೆ ದೇವನಗರಿ ಸಜ್ಜುಗೊಂಡಿದೆ.
ಇಂದಿನಿಂದ ಅ.2ರವರೆಗೆ ಶ್ರೀರಂಭಾಪುರಿ ಪೀಠದ ಜಗದ್ಗುರು ಶ್ರೀಪ್ರಸನ್ನ ರೇಣುಕ ಡಾ|
ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ನಡೆಯಲಿರುವ ದಸರಾ ದರ್ಬಾರ್‌ಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ನಗರದ ಪಿಬಿ ಜರುಗಲಿರುವ ರಂಭಾಪುರಿ ಶ್ರೀಗಳ ಶರನ್ನವರಾತ್ರಿ ಮಹೋತ್ಸವ ಕಣ್ತುಂಬಿಕೊಳ್ಳುವ ಸುಯೋಗ ಈ ಬಾರಿ ದಾವಣಗೆರೆ ನಗರದ ನಾಗರಿಕರಿಗೆ ಒದಗಿ ಬಂದಿದೆ. ಶ್ರೀಜಗದ್ಗುರು ರೇಣುಕಾಚಾರ್ಯರು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ಭದ್ರಾ ನದಿ ತಟದಲ್ಲಿ ರಂಭಾಪುರಿ ಪೀಠ ಸ್ಥಾಪಿಸಿ, ಮಹಾಮುನಿ ಅಗಸ್ತ್ಯರಿಗೆ ಶಿವಾದ್ವೈತ ತತ್ವ ಸಿದ್ಧಾಂತ ಬೋಧಿಸಿ, ಉದ್ಧರಿಸಿದ ಇತಿಹಾಸವಿದೆ. ನೂರಿಪ್ಪತ್ತು ಪರಮಾಚಾರ್ಯರು ಶ್ರೀ ಪೀಠ ಆರೋಹಣಗೈದು ಜನಮನದ ಮೇಲೆ ಅಚ್ಚಳಿಯದ ಪ್ರಭಾವ ಬೀರಿದ್ದಾರೆ.
ಶ್ರೀಪೀಠದ ಲಿಂಗೈಕ್ಯ ಜಗದ್ಗುರುಗಳಾದ ವೀರಗಂಗಾಧರ ಶಿವಾಚಾರ್ಯರು ಶಕ್ತಿ ಆರಾಧನೆ ದಸರಾ ನಾಡಹಬ್ಬಕ್ಕೆ ಮೆರುಗು ತಂದುಕೊಟ್ಟ ಕೀರ್ತಿಗೆ ಪಾತ್ರರಾದವರು.
1986ರಲ್ಲಿ ಶ್ರೀ ರಂಭಾಪುರಿ ಪೀಠದ ಜಗದ್ಗುರು ಶ್ರೀಪ್ರಸನ್ನ ರೇಣುಕ ವೀರ ರುದ್ರಮುನಿದೇವ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ದಾವಣಗೆರೆಯಲ್ಲಿ ಶರನ್ನವರಾತ್ರಿ ಜರುಗಿದ್ದು ಅವಿಸ್ಮರಣೀಯ. ಮಧ್ಯ ಕರ್ನಾಟಕದ ವಾಣಿಜ್ಯ ಹಾಗೂ ಶೈಕ್ಷಣಿಕ ನಗರಿ ದಾವಣಗೆರೆಯಲ್ಲಿ ಈ ಬಾರಿ ಶರನ್ನವರಾತ್ರಿ ಮಹೋತ್ಸವಕ್ಕೆ ಹೈಸ್ಕೂಲ್ ಮೈದಾನದಲ್ಲಿ 145+240 ಅಡಿ ಅಳತೆಯ ವಿಸ್ತಾರದಲ್ಲಿ ಮಾನವ ಧರ್ಮ ಮಂಟಪ ಸಿದ್ಧಗೊಂಡಿದೆ. ಸಭಾಂಗಣದಲ್ಲಿ 8 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. 30+60 ಅಳತೆಯ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ಮಳೆಯಿಂದ ರಕ್ಷಣೆಗೆ ತಗಡಿನ ಹೊದಿಕೆ ಹಾಕಲಾಗಿದೆ. 10 ದಿನಗಳ ಕಾಲ ನಡೆಯಲಿರುವ ಸಂಭ್ರಮದಲ್ಲಿ ನಾಡಿನ ಶಿವಾಚಾರ್ಯರು, ಸಾಹಿತಿಗಳು, ಚಿಂತಕರು, ಕಲಾವಿದರು, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯದ ಸಚಿವರು, ರಾಜಕಾರಣಿಗಳು, ವಿದ್ವಾಂಸರು ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು
Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್’
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.