ರಸ್ತೆ ಸುಧಾರಣೆಗೆ ಆಗ್ರಹಿಸಿ ಮನವಿ
Team Udayavani, Sep 29, 2019, 11:43 AM IST
ರೋಣ: ತಾಲೂಕಿನ ಹಿರೇಮಣ್ಣೂರದಿಂದ ಬಾಸಲಾಪುರ ಮಾರ್ಗವಾಗಿ ರೋಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೆ ದುರಸ್ತಿಗೊಳಿಸಬೇಕು ಎಂದು ಜಯ ಕರ್ನಾಟಕ ರೋಣ ಶಹರ ಘಟಕ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಯ ಕರ್ನಾಟಕ ರೋಣ ಶಹರ ಘಟಕ ಅಧ್ಯಕ್ಷ ಬಾಲಚಂದ್ರ ಕುರಿ ಮಾತನಾಡಿ, ಹಿರೇಮಣ್ಣೂರಿ ಗ್ರಾಮದಿಂದ ಬಾಸಲಾಪುರ ಮಾರ್ಗವಾಗಿ ರೋಣಕ್ಕೆ ತೆರಳಲು ಸಂಪರ್ಕ ಕಲ್ಪಿಸುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿ ವರ್ಷ ಕಳೆಯುತ್ತಾ ಬಂದಿದೆ. ಇದರಿಂದಾಗಿ ಈ ಮಾರ್ಗವಾಗಿ ರೋಣಕ್ಕೆ ಹೋಗಿ ಬರಲು ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ಜೊತೆಗೆ ಅಲ್ಲಲ್ಲಿ ನಿರ್ಮಿಸಲಾದ ಸಿಡಿ (ಮಿನಿ ಸೇತುವೆ)ಗಳು ಕಿತ್ತೂಗಿವೆ. ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ರೋಣಕ್ಕೆ ಬರಲು ಚಿಕ್ಕಮಣ್ಣೂರ ಮಾರ್ಗವಾಗಿ ಸುತ್ತುವರೆದು ಬರಬೇಕಾದ ಪರಿಸ್ಥಿತಿ ಬಂದೊದಗಿದೆ. ರಸ್ತೆ ಅಭಿವೃದ್ಧಿಗಾಗಿ ಈಗಾಗಲೇ ಅನೇಕ ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಲಿಖೀತ ಮತ್ತು ಮೌಖೀಕವಾಗಿ ತಿಳಿಸುತ್ತಾ ಬರಲಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಬೇಕು. ವಿಳಂಬವಾದಲ್ಲಿ ಹಿರೇಮಣ್ಣೂರ, ಬಾಸಲಾಪುರ ಗ್ರಾಮಸ್ಥರೊಂದಿಗೆ ಜಯ ಕರ್ನಾಟಕ ಸಂಘಟನೆ ಬೀದಿಗಿಳಿದು ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಸಿದರು.
ತಹಶೀಲ್ದಾರ್ ಪರವಾಗಿ ಮನವಿ ಸ್ವೀಕರಿಸಿ ಶಿರಸ್ತೇದಾರ ಜೆ.ಎಸ್. ಪಾಟೀಲ ಮಾತನಾಡಿ, ಕೂಡಲೇ ಈ ಮನವಿಯನ್ನು ತಹಶೀಲ್ದಾರ್ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸಂಘಟನೆ ತಾಲೂಕು ಅಧ್ಯಕ್ಷ ಭೀಮಣ್ಣ ಇಂಗಳಿ, ಪ್ರಧಾನ ಕಾರ್ಯದರ್ಶಿ ಜಗದೀಶ ಮಡಿವಾಳರ, ಮುತ್ತುರಾಜ ಹನಸಿ, ಭಾಷಾಸಾಬ್ ನದಾಫ್, ಶ್ರೀಕಾಂತ ಕಂಬಳಿ, ಬಸವರಾಜ ಮಲ್ಲೂರ, ದೇವರಾಜ ಮಾದರ, ವಿಜಯಕುಮಾರ ತಹಶೀಲ್ದಾರ್, ಅಂದಾನಿ ಹುಲ್ಲೂರ,ಮಹಮ್ಮದ್ ರೋಣದ, ಬಸವರಾಜ ಮಾದರ, ಶರಣಪ್ಪಗೌಡ ಖ್ಯಾತನಗೌಡ್ರ, ಗುರು ಮಠಪತಿ, ಸಂಗಮೇಶ ಕಂಬಳಿ, ಮೈಲಾರಿ ಚಲವಾದಿ, ಮುತ್ತಣ್ಣ ಕುರಿ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.