ಅಧಿಕಾರ ಸಿಕ್ಕಿಲ್ಲ ಅಂತಾ ಅಳಲು ಹೋಗಬಾರದು: ಸಿದ್ದರಾಮಯ್ಯ

ಉಪಚುನಾವಣೆ ನಂತರ ಬಿಜೆಪಿ ಸರ್ಕಾರ ಪತನ ಎಂದ ಮಾಜಿ ಸಿಎಂ

Team Udayavani, Sep 29, 2019, 7:25 PM IST

Siddaramaiah-1-726

ಕಲಬುರಗಿ: ಕೂಸು ಹುಟ್ಟು ಮುಂಚಿತವಾಗಿ ಕುಲಾಯಿ‌ ಹಾಕಬಾರದು. ಅಧಿಕಾರ ಕೊಡುವವರು ಜನರು, ಅಧಿಕಾರ ಸಿಕ್ಕಿಲ್ಲ ಅಂತಾ ಅಳಲು ಹೋಗಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ನಾನು ಐದು ವರ್ಷ ಸಂಪೂರ್ಣ ಸಿಎಂ ಆಗಿ ಕೆಲಸ ಮಾಡಿದ್ದೇನೆ, ಇದು ಕೆಲವರಿಗೆ ಹೊಟ್ಟೆ ಉರಿ ಇದೆ.‌ ಜನರು ಅಧಿಕಾರ ಕೊಟ್ರೆ ಸೇವೆ ಮಾಡಬೇಕು, ಕೊಡಲಿಲ್ಲ ಅಂದ್ರೆ ನಿಮ್ಮದೇ ಆದ ರೀತಿ ಸಮಾಜ ಸೇವೆ ಮಾಡಬೇಕೆಂದರು.‌

ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರು, ವಲಸಿಗ ಕಾಂಗ್ರೆಸ್ಸಿಗರು ಅಂತಾ ಜಟಾಪಟಿಯೇ ಇಲ್ಲ. ಮೊದಲಿಗರು ಇಲ್ಲ, ಹೊಸಬರೂ ಇಲ್ಲ, ವಲಸಿಗರೂ ಇಲ್ಲ. ಎಲ್ಲಾ ಕಾಂಗ್ರೆಸ್ಸಿಗರೇ ಇರೋದು. ಸಿದ್ದರಾಮಯ್ಯನವರನ್ನು ಮೂಲೆಗುಂಪು ಮಾಡುತ್ತಿದ್ದಾರೆ ಎಂಬುವುದೂ ಎಲ್ಲ ಸುಳ್ಳು, ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಂಸದ ಮುನಿಯಪ್ಪರಿಗೆ ನಾನು ಏಕವಚನದಲ್ಲಿ ಮಾತನಾಡಿಲ್ಲ, ಅವರೂ ಏಕವಚನದಲ್ಲಿ ಮಾತನಾಡಿಲ್ಲ. ನಾವೆಲ್ಲರೂ ಫ್ರೆಂಡ್ಸ್. ಭಿನ್ನಾಭಿಪ್ರಾಯಗಳು ಇರ್ತಾವೆ.‌ ಹಾಗಂತ ವೈರಿಗಳು, ದ್ವೇಷಿಗಳು ಅಲ್ಲ. ಕಾಂಗ್ರೆಸ್ ಯಾರ ಹಿಡಿತದಲ್ಲೂ ಇಲ್ಲ. ಪಕ್ಷದಲ್ಲಿ ಎಲ್ಲ ನಾಯಕರಗಳ ಪ್ರಭಾವ ಇದೆ. ಕಾರ್ಯಕರ್ತರ ಪ್ರಭಾವ‌ವೂ ಇದೆ ಎಂದರು.

ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ ಆಗಿ ಐವತ್ತು ದಿನಗಳಾದರೂ ಕೇಂದ್ರ ಸರ್ಕಾರ ಒಂದು ರೂಪಾಯಿ ಹಣ ನೀಡಿಲ್ಲ. ಸಿಎಂ ಯಡಿಯೂರಪ್ಪ ನಾಳೆ ಕೊಡ್ತಾರೆ, ನಾಳೆ ಕೊಡ್ತಾರೆ ಅಂತಾ ಹೇಳ್ತಾನೇ ಇದ್ದಾರೆ. ಬಿಜೆಪಿಯವರು, ಬಿಎಸ್‌ವೈ, ರಾಜ್ಯದ 25 ಸಂಸದರು ಯಾರೂ ಸಹ ಪ್ರಧಾನಿಗೆ ಒತ್ತಾಯ ಮಾಡಿಲ್ಲ ಎಂದರು.

ಬಿಜೆಪಿಯವರು 105 ಜನ ಇಟ್ಟುಕೊಂಡು ಆಡಳಿತ ಮಾಡುತ್ತಿದ್ದಾರೆ. ಅವರಿಗೆ ಬಹುಮತ ಇಲ್ಲ.‌ ಉಪಚುನಾವಣೆ ಆದ ಮೇಲೆ ನಾವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ.‌ ಬಿಜೆಪಿ ಸರ್ಕಾರ ಪತನ ಆಗುತ್ತೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಹದಿನೈದು ಕ್ಷೇತ್ರಗಳಲ್ಲಿ ಉಪ ಚುನಾವಣೆ ವಿಚಾರದಲ್ಲಿ ಬಿಜೆಪಿ ಸರ್ಕಾರದ ಅಣತಿಯಂತೆ ಚುನಾವಣೆ ಆಯೋಗ ನಡೆದುಕೊಳ್ಳುತ್ತಿದೆ. ಚುನಾವಣಾ ಆಯೋಗದವರು ಸ್ವಯಂಪ್ರೇರಿತವಾಗಿ ವಾದ ಮಾಡಿದರು. ನಂತರ ಮತ್ತೆ ದಿನಾಂಕ ಘೋಷಣೆ ಮಾಡಿದರು. ಅನರ್ಹ ಶಾಸಕರಿಗೆ ಅನುಕೂಲ ಆಗಲಿ ಅಂತಾ ಹೀಗೆಲ್ಲ ಮಾಡುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಕಿಡಿಕಾರಿದರು.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.