ಪ್ಲಾಸ್ಟಿಕ್‌ ಮುಕ್ತ ನಗರಕ್ಕೆ ಜನರ ಸಹಕಾರ ಅಗತ್ಯ: ಶೆಟ್ಟರ


Team Udayavani, Sep 30, 2019, 9:55 AM IST

huballi-tdy-2

ಹುಬ್ಬಳ್ಳಿ: ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.

ರವಿವಾರ ಇಲ್ಲಿನ ನೆಹರು ಮೈದಾನದಲ್ಲಿ ಮಹಾನಗರ ಪಾಲಿಕೆಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ಪ್ರಯುಕ್ತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ ನಿರ್ಬಂಧಿಸುವ ಕುರಿತು ಆಯೋಜಿಸಿದ್ದ ನಡಿಗೆ ಹಾಗೂ ಸೈಕಲ್‌ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿಷೇಧಿತ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಯನ್ನು ಸ್ವಯಂ ಪ್ರೇರಣೆಯಿಂದ ತ್ಯಜಿಸಬೇಕು ಎಂದು ಹೇಳಿದರು.

ಎಲ್ಲವೂ ಸರಕಾರದಿಂದಲೇ ಸಾಧ್ಯ ಎನ್ನುವ ಭಾವನೆ ಜನರಲ್ಲಿದೆ. ಸರಕಾರ ಕೇವಲ ಯೋಜನೆಗಳನ್ನು ಜಾರಿಗೆ ತಂದು ಅವುಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ನೆರವು ನೀಡುತ್ತದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಪ್ಲಾಸ್ಟಿಕ್‌ ಮುಕ್ತ ದೇಶ ನಿರ್ಮಾಣಕ್ಕೆ ಕರೆ ನೀಡಿದ್ದು, ದೇಶದ ವಿವಿಧ ಭಾಗಗಳಲ್ಲಿ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಂದು ಬಾರಿ ಬಳಸಿ ಬಿಸಾಡುವ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌ ಸೇರಿದಂತೆ ವಿವಿಧ ವಸ್ತುಗಳನ್ನು ಬಳಸುವುದನ್ನು ಜನರು ಸ್ವಯಂ ಪ್ರೇರಣೆಯಿಂದ ಕೈಬಿಡಬೇಕು. ಪ್ಲಾಸ್ಟಿಕ್‌ ಮುಕ್ತ ಒಂದು ದಿನಕ್ಕೆ ಸೀಮಿತವಾಗದೆ ನಿರಂತರ ನಡೆಯಬೇಕು ಎಂದರು.

ನಡಿಗೆ-ಸೈಕಲ್‌ ಜಾಥಾ: ಏಕೆ ಬಳಕೆ ಪ್ಲಾಸ್ಟಿಕ್‌ ವಸ್ತು ಬಳಕೆ ಹಾಗೂ ಸ್ವತ್ಛತಾ ಹೀ ಸೇವಾ ಅಭಿಯಾನ ಪ್ರಯುಕ್ತ ಆರಂಭವಾದ ನಡಿಗೆ ಹಾಗೂ ಸೈಕಲ್‌ ಜಾಥಾ ಇಲ್ಲಿನ ನೆಹರು ಕ್ರೀಡಾಂಗಣದಿಂದ ಆರಂಭವಾಗಿ ಕಿತ್ತೂರ ಚನ್ನಮ್ಮ ವೃತ್ತ, ಕೋರ್ಟ್‌ ವೃತ್ತ, ಸರ್ವೋದಯ ವೃತ್ತದಿಂದ ಗದಗ ರಸ್ತೆ ಮೂಲಕ ನೆಹರು ಕ್ರೀಡಾಂಗಣಕ್ಕೆ ಆಗಮಿಸಿ ಸಮಾಪ್ತಿಗೊಂಡಿತು.

ಜನಜಾಗೃತಿ: ಜಾಥಾದಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪ್ಲಾಸ್ಟಿಕ್‌ ಬಳಕೆಯಿಂದ ಆಗುವ ದುಷ್ಪರಿಣಾಮಗಳು ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ವಿಧಾನ ಪರಿಷತ್‌ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ದೀಪಾ ಚೋಳನ್‌, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಆಕೃತಿ ಬನ್ಸಾಲ್‌, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಹೆಚ್ಚುವರಿ ಆಯುಕ್ತ ಅಜೀಜ್‌ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ ಸೇರಿದಂತೆ ಇನ್ನಿತರರಿದ್ದರು.

ಟಾಪ್ ನ್ಯೂಸ್

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.