ಅನಾಥಾಶ್ರಮಕ್ಕೆ ದಿನೋಪಯೋಗಿ ಪರಿಕರಗಳ ವಿತರಣೆ
Team Udayavani, Sep 30, 2019, 6:02 PM IST
ಮುಂಬಯಿ, ಸೆ. 29: ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡುಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ಸಾಂಸ್ಕೃತಿಕ, ವೈದ್ಯಕೀಯ, ಶೈಕ್ಷಣಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುತ್ತಾ ಸಮಾಜಮುಖೀಯಾಗಿ ಗುರುತಿಸಿಕೊಂಡಿದ್ದು, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರಾದ ಸಿಎ ವಿಶ್ವನಾಥ ಶೆಟ್ಟಿ ಅವರ ಉಪಸ್ಥಿತಿಯೊಂದಿಗೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳ ಸಹಕಾರದೊಂದಿಗೆ ಸೆ. 22ರಂದು ವಿಕ್ರೋಲಿ ಪೂರ್ವದ ಠಾಗೋರ್ ನಗರದ ಗುಡ್ ಸಮರ್ಥನ್ ಮಿಷನ್ ವಿಜಯಾಶ್ರಮಯಕ್ಕೆ ಭೇಟಿ ನೀಡಿತು.
ಈ ಅನಾಥಶ್ರಮವು 1970ರಲ್ಲಿ ಸ್ಥಾಪನೆಯಾಗಿದ್ದು ನಿರ್ಗತಿಕ ವೃದ್ದರಿಂದ ಅನಾಥ ಮಕ್ಕಳು ಸೇರಿದಂತೆ ಸುಮಾರು 80 ಜನರಿದ್ದು ಇವರ ಸೇವೆಯನ್ನು ಆಶ್ರಮವು ಶ್ರದ್ಧೆಯಿಂದ ಮಾಡುತ್ತಿದೆ. ಬದುಕಿನಲ್ಲಿ ಸಾರ್ಥಕತೆ ಕಾಣಬೇಕಾದರೆ ಬಡವರ, ದೀನರ, ಅಶಕ್ತರ ಸೇವೆ ಮಾಡಬೇಕು, ಅವರ ಕಣ್ಣೀರೊರೆಸುವ ಕಾರ್ಯ ಮಾಡಿ ಅವರ ಮೊಗದಲ್ಲೂ ಸಂತಸ ಭರಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸಬೇಕು ಎನ್ನುವ ಮಾತಿಗನುಗುಣವಾಗಿ ಅನಾಥಾಶ್ರಮಕ್ಕೆ ಭೇಟಿ ನೀಡಿ ಮಕ್ಕಳು ಹಾಗೂ ವೃದ್ಧರಿಗೆ ಆ ದಿನದ ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಮಹಿಳಾ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು.
ಮಾತ್ರವಲ್ಲದೆ ಅವರಿಗೆ ಅವಶ್ಯವಿರುವ ದಿನೋಪಯೋಗಿ ಆಹಾರೋಪಯೋಗಿ ಜತೆಗೆ ಬಟ್ಟೆ ಬರೆ, ಬೆಡ್ ಶೀಟ್‌ಗಳನ್ನು
ನೀಡಲಾಯಿತು. ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷರಾದ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರೋಜಾ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯದರ್ಶಿ ಅಮೃತಾ ಶೆಟ್ಟಿ, ಕೋಶಾಧಿಕಾರಿ ಡಾ| ಪಲ್ಲವಿ ಶೆಟ್ಟಿ, ಜತೆ ಕಾರ್ಯದರ್ಶಿ ಸರೋಜಿನಿ ಶೆಟ್ಟಿ, ಜತೆ ಕೋಶಾಧಿಕಾರಿ ವೀಣಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾದ ತಾರಾನಾಥ ಶೆಟ್ಟಿ, ಸೇರಿದಂತೆ, ಉದಯ ಎಲ್. ಶೆಟ್ಟಿ ಪೇಜಾವರ, ವಿನುತಾ ಶೆಟ್ಟಿ, ಶರ್ಮಿಳಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಜ್ಯೋತಿ ಶೆಟ್ಟಿ, ಶಾಂತಾ ಶೆಟ್ಟಿ, ನಿರ್ಮಲಾ ಶೆಟ್ಟಿ, ವಿಕಾಸ್ ರೈ, ರಿತೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.