ಬೇಡಿಕೆ ಈಡೇರಿಕೆಗೆ ಒತ್ತಾಯ
ಕೃಷಿ ಕೂಲಿ ಕಾರ್ಮಿಕರಿಂದ ತಾಪಂ ಎದುರು ಪ್ರತಿಭಟನೆ
Team Udayavani, Sep 30, 2019, 6:17 PM IST
ಹೊಸಪೇಟೆ: ತಾಲೂಕಿನ ಚಿಲಕನ ಹಟ್ಟಿ ಗ್ರಾಮದ ಗ್ರಾಮೀಣ ಖಾತ್ರಿಯ ಕೃಷಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಚಿಲಕನಹಟ್ಟಿ ಗ್ರಾಮದ ನಾಗರಿಕರ ಹೋರಾಟ ಸಮಿತಿ ಹಾಗೂ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕು ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಲಾಯಿತು.
ಎಪ್ರಿಲ್ ತಿಂಗಳಿನಲ್ಲಿ 32 ನರೇಗಾ ಕಾರ್ಮಿಕರ ಕೆಲಸಕ್ಕೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಅದರಲ್ಲಿ ನಾಲ್ಕು ಜನ ಮೃತಪಟ್ಟಿದ್ದರು. ಇನ್ನುಳಿದ 15 ಜನರಿಗೆ ಗಂಭೀರ ಗಾಯ ಹಾಗೂ 13 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಗಂಭೀರವಾಗಿ ಗಾಯಗೊಂಡವರು ಇಲ್ಲಿವರೆಗೂ ಚೇತರಿಸಿಕೊಳ್ಳುತ್ತಿಲ್ಲ. ಹಾಗಾಗಿ ಅವರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.
ಸಾರಿಗೆ ಇಲಾಖೆಯಿಂದ ಮೃತ ಕುಟುಂಬಗಳಿಗೆ ತಲಾ 15 ಸಾವಿರ ರೂ. ಹಾಗೂ ಗಾಯಾಳುಗಳಿಗೆ 5 ಸಾವಿರ ನೀಡಿದೆ. ಅಲ್ಲದೇ, ಜಿಲ್ಲಾ ಪಂಚಾಯಿತಿ ಮೃತ ಕುಟುಂಬಕ್ಕೆ ತಲಾ 75 ಸಾವಿರ ರೂ. ನೀಡಲಾಗಿದೆ. ಆದರೆ, ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆಗಾಗಿ ಲಕ್ಷಾಂತರ ರೂ. ವೆಚ್ಚ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೀಡಬೇಕು. ಗಾಯಗೊಂಡವರಿಗೆ 5 ಲಕ್ಷ ರೂ. ನೀಡಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಹಾಗೂ ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಭದ್ರತಾ ನಿಧಿ ಮೃತ ಕುಟುಂಬಗಳಿಗೆ ನೆರವಿಗೆ ಬರಬೇಕು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದರು.
ಬಳಿಕ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀಕುಮಾರ ಆರ್.ಕೆ. ಅವರಿಗೆ ಮನವಿ ಸಲ್ಲಿಸಿದರು. ಮುಖಂಡರಾದ ಮರಡಿ ಜಂಬಯ್ಯನಾಯಕ, ಆರ್.ಎಸ್.ಬಸವರಾಜ, ಆರ್. ಭಾಸ್ಕರರೆಡ್ಡಿ, ಕೆ. ನಾಗರತ್ನಮ್ಮ, ಎಂ.ಗೋಪಾಲ, ಸಂದೀಪ್, ಮೌನೇಶ್, ರತ್ನಮ್ಮ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.