BSFನಿಂದ ವಜಾಗೊಂಡ ಯಾದವ್ ಹರ್ಯಾಣ ಸಿಎಂ ಖಟ್ಟರ್ ವಿರುದ್ಧ ಸ್ಪರ್ಧೆ
Team Udayavani, Sep 30, 2019, 6:52 PM IST
ಚಂಡೀಗಢ್: ಬಿಎಸ್ ಎಫ್ (ಗಡಿ ಭದ್ರತಾ ಪಡೆಯ)ನಿಂದ ವಜಾಗೊಂಡಿದ್ದ ತೇಜ್ ಬಹಾದೂರ್ ಯಾದವ್ ಅವರು ಅಕ್ಟೋಬರ್ ನಲ್ಲಿ ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.
ಭಾನುವಾರ ಪ್ರಾದೇಶಿಕ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳಕ್ಕೆ ಯಾದವ್ ಸೇರ್ಪಡೆಯಾಗಿದ್ದರು. ಕರ್ನಲ್ ವಿಧಾನಸಭಾ ಕ್ಷೇತ್ರದಿಂದ ಹಾಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಅಖಾಡಕ್ಕಿಳಿಯುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಪ್ರಮುಖವಾಗಿದೆ ಎಂದು ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೇನೆಯಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಿರುವುದಾಗಿ ಆರೋಪಿಸಿ ಯಾದವ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಅಪ್ ಲೋಡ್ ಮಾಡಿದ್ದು, ಬಳಿಕ ಬಿಎಸ್ ಎಫ್ ನಿಂದ ವಜಾಗೊಳಿಸಲಾಗಿತ್ತು.
ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತೇಜ್ ಬಹದ್ದೂರ್ ಅವರನ್ನು ಬಿ.ಎಸ್.ಪಿ., ಎಸ್.ಪಿ., ಆರ್.ಎಲ್.ಡಿ. ಪಕ್ಷಗಳ ಮಹಾಘಟಬಂಧನ್ ಅಭ್ಯರ್ಥಿಯಾಗಿ ಉತ್ತರಪ್ರದೇಶದ ವಾರಣಾಶಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಣಕ್ಕಿಳಿಸಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿದ್ದರಿಂದ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.