ಆಯುಕ್ತರ ಕಚೇರಿಯಲ್ಲಿ ಬೊಂಬೆಗಳ ಬೆಡಗು


Team Udayavani, Oct 1, 2019, 3:09 AM IST

ayuktara

ಬೆಂಗಳೂರು: ಪೊಲೀಸರ ಬೂಟು, ಲಾಠಿ ಸದ್ದು ಕೇಳಿ ಬರುತ್ತಿದ್ದ ಸ್ಥಳದಲ್ಲಿಗ ದಸರಾ ಬೊಂಬೆಗಳ ಸಂಭ್ರಮ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಆಚರಣೆ ಗರಿಗೆದರಿದ್ದರೆ, ಇತ್ತ ನಗರದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿಯೂ ದಸರಾ ಕಳೆಗಟ್ಟಿದೆ. ನಗರ ಪೊಲೀಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಗರ ಆಯುಕ್ತರ ಕಚೇರಿ ಆವರಣದಲ್ಲಿ ದಸರಾ ಆಚರಣೆಗೆ ಚಾಲನೆ ನೀಡಲಾಗಿದೆ.

ಇಡೀ ಕಚೇರಿ ಆವರಣ ಮಾವಿನ ತೋರಣ, ಬಾಳೆ ಗಿಡದ ಸ್ವಾಗತ ಕಮಾನು, ವಿದ್ಯುತ್‌ ದೀಪಗಳಿಂದ ಅಲಂಕೃತಗೊಂಡು ಮದುವಣಗಿತ್ತಿಯಂತೆ ಸಿಂಗಾರಗೊಂಡಿದ್ದು, ಪ್ರವೇಶ ದ್ವಾರದ ಎಡಭಾಗದಲ್ಲಿ ನಿರ್ಮಿಸಿರುವ ಸುಂದರ ವೇದಿಕೆಯಲ್ಲಿ ನಾನಾ ರೀತಿಯ ಬೊಂಬೆಗಳನ್ನು ಪ್ರದರ್ಶನಕ್ಕಿಡಲಾಗಿದೆ. ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರ ವೈಯಕ್ತಿಕ ಆಸಕ್ತಿಯಿಂದ ಕಚೇರಿಯಲ್ಲಿ ದಸರಾ ವೈಭವ ಮನೆಮಾಡಿದೆ. ನಟ, ಕಲಾವಿದ ಅರುಣ್‌ ಸಾಗರ್‌ ನೇತೃತ್ವದ ತಂಡ, ಬಣ್ಣ-ಬಣ್ಣದ ವಿವಿಧ ಪುಷ್ಪಗಳಿಂದ ಅಲಂಕರಿಸಿ, ಜಗಮಗಿಸುವ ದೀಪಾಲಂಕರದೊಂದಿಗೆ ವೇದಿಕೆ ನಿರ್ಮಿಸಿದೆ.

ಅಲ್ಲದೆ, ಇಡೀ ಮೈಸೂರು ದಸರಾ ಇತಿಹಾಸ ಬಿಂಬಿಸುವ, ಜಂಬೂ ಸವಾರಿ, ಆನೆಗಳು, ಕುದುರೆಗಳು, ಅರಮನೆ, ಖಾಸಗಿ ದರ್ಬಾರ್‌, ದಶಾವತಾರದ ಬೊಂಬೆಗಳು, ಹಳ್ಳಿ ಸೊಗಡು, ಮಹಾಭಾರತ, ಮಸೀದಿ, ಮದರ್‌ ತೆರೆಸಾ, ವಿಶ್ವದ ಹಾಸ್ಯಚಕ್ರವರ್ತಿ ಚಾರ್ಲಿ ಚಾಪ್ಲಿನ್‌, ದುರ್ಗೆ, ಸರಸ್ವತಿ, ಮಹಿಷಾಸುರ, ಗೌತಮಬುದ್ಧ, ಡಾ.ಎ.ಪಿ.ಜೆ.ಅಬ್ದುಲ್‌ ಕಲಾಂ, ಸ್ವಾಮಿ ವಿವೇಕಾನಂದ ಸೇರಿ ಸುಮಾರು 60ಕ್ಕೂ ಹೆಚ್ಚು ಮಾದರಿಯ ನೂರಾರು ಬೊಂಬೆಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಕೆಲ ಪೊಲೀಸ್‌ ಸಿಬ್ಬಂದಿ ಕೂಡ ಸ್ವಇಚ್ಛೆಯಿಂದ ಬೊಂಬೆಗಳನ್ನು ತಂದು ಪ್ರದರ್ಶನದಲ್ಲಿ ಇರಿಸಿದ್ದಾರೆ.

ಹಬ್ಬದ ದಿನಗಳು ಸೇರಿ ದಿನದ 24 ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ಪೊಲೀಸ್‌ ಸಿಬ್ಬಂದಿಯಲ್ಲಿ ಒಬ್ಬ ಕಲಾವಿದ, ಹಾಡುಗಾರ, ನಿರ್ದೇಶಕ, ಕವಿ, ಸಾಹಿತಿ ಇದ್ದಾನೆ. ಅಂತಹ ಮನಸ್ಸುಗಳಿಗೆ ಉತ್ತೇಜನ ನೀಡಲು ಕಚೇರಿ ಆವರಣದಲ್ಲಿ ದಸರಾ ಆಚರಣೆ ಮಾಡಲಾಗಿದೆ ಎನ್ನುತ್ತಾರೆ ಪ್ರದರ್ಶನದ ಉಸ್ತುವಾರಿ ಹೊತ್ತ ಅಧಿಕಾರಿಗಳು.

ಸಾರ್ವಜನಿಕರಿಗೆ ಅಚ್ಚರಿ: ತಮ್ಮ ಸಮಸ್ಯೆಗಳನ್ನು ಹೊತ್ತು ಸೋಮವಾರ ಕಚೇರಿ ಪ್ರವೇಶಿಸುತ್ತಿದ್ದ ಸಾರ್ವಜನಿಕರು ಅಚ್ಚರಿಯಿಂದಲೇ ದಸರಾ ಬೊಂಬೆಗಳನ್ನು ವೀಕ್ಷಿಸಿದರು. ದಸರಾ ಸಂಭ್ರಮ ಕಣ್ತಂಬಿಕೊಳ್ಳಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಯಿತು. ಜತೆಗೆ ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳಿದ್ದ ಪೊಲೀಸ್‌ ಸಿಬ್ಬಂದಿ ಕೂಡ ತಮ್ಮ ಕುಟುಂಬ ಸಮೇತ ಬಂದು ಬೊಂಬೆ ಪ್ರದರ್ಶನ ವೀಕ್ಷಿಸಿದರು. ಕೆಲ ಸಾರ್ವಜನಿಕರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು ಕಂಡುಬಂತು.

ಈ ಕುರಿತು ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ಸದಾ ಕೆಲಸದ ಒತ್ತಡದಲ್ಲಿರುವ ಪೊಲೀಸರು ಈ ನಾಡಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ದಸರಾ ಹಬ್ಬ ಮಾತ್ರವಲ್ಲ, ಸಮವಸ್ತ್ರಧಾರಿ ಯೋಧರ ಹಬ್ಬ. ಹೀಗಾಗಿ ತಮ್ಮ ಸ್ನೇಹಿತರ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ನಮ್ಮ ಇತರೆ ಪೊಲೀಸ್‌ ಸಿಬ್ಬಂದಿಗೆ ಸ್ಫೂರ್ತಿ ನೀಡಿದೆ. 9ದಿನವೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.