ಪ್ಲಾಸ್ಟಿಕ್ ಬಳಕೆಗೆ ನಿಷೇಧ
Team Udayavani, Oct 1, 2019, 1:58 PM IST
ಅಡಹಳ್ಳಿ: ಗ್ರಾಮದಲ್ಲಿರುವ ಅಂಗಡಿ-ಮುಂಗಟ್ಟುಗಳ ಮಾಲೀಕರು, ಸಗಟು ವ್ಯಾಪಾರಸ್ಥರು, ಹೋಟೆಲ್ ಸೇರಿದಂತೆ ಸಣ್ಣ ಹಾಗೂ ಗೃಹ ಕೈಗಾರಿಕೆ ಮಾಲೀಕರು ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಅಡಹಳ್ಳಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್.ಎಸ್. ಪೋತದಾರ ಹೇಳಿದರು.
ಗ್ರಾಮದಲ್ಲಿ ಜರುಗಿದ ಪ್ಲಾಸ್ಟಿಕ್, ಕ್ಯಾರಿ ಬ್ಯಾಗಗಳು ಹಾಗೂ ದೈನಂದಿನ ಬಳಕೆಯಲ್ಲಿರುವ ಪ್ಲಾಸ್ಟಿಕ್ ವಸ್ತುಗಳ ನಿಷೇಧದ ತಿಳಿವಳಿಕೆ ನೀಡಿ ನಂತರ ಅವರು ಮಾತನಾಡಿ, ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾನಿಯಾಗಿತ್ತಿದ್ದು, ಸರಕಾರದ ಆದೇಶದಂತೆ ಅಕ್ಟೋಬರ್ 2ರಿಂದ ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ನಿಷೇಧಕ್ಕೆ ಆದೇಶಿಸಿರುವ ಹಿನ್ನಲೆಯಲ್ಲಿ ಅಡಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಯಾರು ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ಒಂದು ವೇಳೆ ಬಳಸಿದ್ದು ಕಂಡು ಬಂದರೆ ಅಂಥವರ ವಿರುದ್ಧ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ನಂತರ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಗ್ರಾಪಂ ಆಧಿಕಾರಿಗಳು ನೋಟಿಸ್ ನೀಡಿದರು. ಈ ವೇಳೆ ಗ್ರಾಪಂ ಸಿಬ್ಬಂದಿ ಡಿ.ಕೆ. ಸೂರ್ಯವಂಶಿ, ಜಗದೀಶ ಸೂರ್ಯವಂಶಿ, ಮಹಾದೇವ ತಾಂವಶಿ, ಮುನ್ನೀರ್ ಮುಲ್ಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.