ಸಂಸದ ಪ್ರತಾಪ ಸಿಂಹ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ
Team Udayavani, Oct 1, 2019, 3:35 PM IST
ಬೀದರ: ಮಹಿಷಾಸುರ ರಾಜರ ದಸರಾ ಹಬ್ಬ ರದ್ದುಗೊಳಿಸಲು ಹಾಗೂ 144ನೇ ಕಲಂ ನಿಷೇದಾಜ್ಞೆ ಜಾರಿಗೊಳಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರಿ ಗೂಂಡಾ ವರ್ತನೆ ಪ್ರದರ್ಶಿಸಿದ ಮೈಸೂರು ಸಂಸದ ಪ್ರತಾಪ ಸಿಂಹ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ದಲಿತಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಮೂಲ ನಿವಾಸಿಗಳಾದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ದಿನನಿತ್ಯ ಅತ್ಯಾಚಾರ, ದಬ್ಟಾಳಿಕೆಗಳು ನಿರಂತರವಾಗಿ ನಡೆಯುತ್ತಿವೆ. ಇಂತಹ ಅಮಾನವೀಯ ಕೃತ್ಯ ತಡೆಗಟ್ಟುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಸೆ. 27ರಂದು ಮೈಸೂರು ಚಾಮುಂಡಿ ಬೆಟ್ಟದ ಮೇಲೆ ಮೂಲನಿವಾಸಿಗಳ ಶ್ರೇಷ್ಠ ದೊರೆ ಮಹಿಷಾಸುರ ರಾಜರ ದಸರಾ ಆಚರಣೆ ಮಾಡುತ್ತಿರುವ ಸಂದರ್ಭದಲ್ಲಿ ವೇದಿಕೆ ತೆರುವುಗೊಳಿಸಿಮೂಲನಿವಾಸಿಗಳ ಸ್ವಾಭಿಮಾನಕ್ಕೆ ಧಕ್ಕೆ ತರಲಾಗಿದೆ. ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅವಾಚ್ಯವಾಗಿ
ನಿಂದಿಸಿ ಬೇಜವಾಬ್ದಾರಿತನ ತೋರಿದ್ದಾರೆ. ಭಾವೈಕ್ಯತೆ ವಿರುದ್ಧವಾಗಿ ನಡೆದುಕೊಂಡು ಶಾಂತಿ ಭಂಗ ಮಾಡಿದ್ದಾರೆ ಎಂದು ದಲಿತ ಮುಖಂಡರು ಆರೋಪಿಸಿದರು.
ಮನುವಾದದ ಮನಸುಳ್ಳ ಸಂಸದ ಪ್ರತಾಪ ಸಿಂಹ ಮಹಿಷಾ ದಸರಾ ಹಬ್ಬ ನಡೆಯ ದಂತೆ ತಡೆಹಿಡಿದು ಮೂಲ ನಿವಾಸಿಗಳು ಮತ್ತು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತಂದು ಶಾಂತಿ ಭಂಗ ಮಾಡಿದ್ದಾರೆ. ಕೂಡಲೇ ಅವರ ವಿರುದ್ಧ ಗೂಂಡಾ ಕಾಯ್ದೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.