ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಹೋರಾಟ
Team Udayavani, Oct 1, 2019, 3:50 PM IST
ಲಿಂಗಸುಗೂರು: ನೆರೆ ಹಾವಳಿಯಿಂದ ಜನರು ಬೀದಿ ಪಾಲಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಹೋರಾಟ ನಡೆಸುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸೋಮವಾರ ತಾಲೂಕಿನ ಶೀಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು, ನೆರೆಗೆ ಕೊಚ್ಚಿಹೋದ ಶೀಲಹಳ್ಳಿ ಸೇತುವೆ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ ನೆರೆಹಾವಳಿಗೆ ಜನರು ಬದುಕು ಕೊಚ್ಚಿ ಹೋಗಿದೆ. ಸಂಪೂರ್ಣ ಮನೆ ಕಳೆದುಕೊಂಡುವರಿಗೆ ಕೇವಲ 10 ಸಾವಿರ ರೂ. ನೀಡಿದ್ದು ಬಿಟ್ಟರೆ ಇನ್ನಾವುದೇ ಪರಿಹಾರ ನೀಡಿಲ್ಲ. ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದ್ದೂ ಇಲ್ಲದಂತಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕಾದ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ಈ ಸರ್ಕಾರದ ವಿರುದ್ಧ ಅ ಧಿವೇಶನದಲ್ಲಿ ಹೋರಾಟ ನಡೆಸುವುದಾಗಿ ಹೇಳಿದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರೆ ಪರಿಹಾರಕ್ಕಾಗಿ ಬಿಡಿಗಾಸು ನೀಡಿಲ್ಲ. ರಾಜ್ಯದ ಜನರ ಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್, ಶಾಸಕ ಡಿ.ಎಸ್.ಹೂಲಗೇರಿ, ಮಾಜಿ ಸಚಿವ ಆರ್.ಬಿ.ತಿಮ್ಮಾಪುರ, ಮಾಜಿ ಸಂಸದ ಬಿ.ವಿ.ನಾಯಕ, ಕೆ.ವಿರೂಪಾಕ್ಷಪ್ಪ, ಜಿಪಂ ಸದಸ್ಯ ಸಂಗಣ್ಣ ದೇಸಾಯಿ, ಮುಖಂಡರಾದ ಶರಣಪ್ಪ ಮೇಟಿ, ಪಾಮಯ್ಯ ಮುರಾರಿ, ತಾಪಂ ಸದಸ್ಯ ವಾಹೀದ್ ಖಾದ್ರಿ, ಹನುಮಂತ ರೆಡ್ಡಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.