ನೇಪಾಲ ಸ್ಪೀಕರ್ ವಿರುದ್ಧ ಅತ್ಯಾಚಾರ ಆರೋಪ
Team Udayavani, Oct 1, 2019, 7:36 PM IST
ಕಾಠ್ಮಂಡು: ನೇಪಾಲ ಸಂಸತ್ನ ಕೆಳಮನೆಯ ಸ್ಪೀಕರ್ ಕೃಷ್ಣ ಬಹಾದುರ್ ಮಹಾರಾ ವಿರುದ್ಧ ಲೈಂಗಿಕ ಕಿರುಕುಳ ನೀಡುವ ಆರೋಪ ಕೇಳಿಬಂದಿದೆ. ಸಂಸತ್ನ ಕಾರ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜತೆಗೆ ಅನುಚಿತವಾಗಿ ವರ್ತಿಸಿದ್ದು ಮಾತ್ರವಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಅಧಿಕೃತವಾಗಿ ದೂರು ದಾಖಲಾಗಿಲ್ಲ. ಕಾಠ್ಮಂಡುವಿನ ಟಿಂಕುನೆ ಎಂಬಲ್ಲಿರುವ ವಸತಿ ಸಮುತ್ಛಯದಲ್ಲಿ ರವಿವಾರ ಮಹಾರಾ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಸಂದರ್ಭದಲ್ಲಿ ಪತಿ ಮನೆಯಲ್ಲಿ ಇರಲಿಲ್ಲ ಎಂದು ಮಹಿಳೆ ಹೇಳಿದ್ದಾರೆ.
ಆರೋಪಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ಕಾರ್ಯಾಲಯ ಇದೆಲ್ಲ ಸುಳ್ಳು ಆರೋಪಗಳು ಎಂದು ಹೇಳಿಕೆ ನೀಡಿದೆ. ಇದೆಲ್ಲ ಭ್ರಮೆಯಿಂದ ಕೂಡಿದ ಆರೋಪಗಳಾಗಿವೆ ಮಹಾರಾ ಅವರ ಮಾಧ್ಯಮ ಕಾರ್ಯದರ್ಶಿ ದಿಲ್ಲಿ ಮಲ್ಲಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.