ಹಾಂಕಾಂಗ್: ಪ್ರತಿಭಟನಕಾರನ ಎದೆಗೆ ಗುಂಡು
Team Udayavani, Oct 2, 2019, 5:00 AM IST
ಹಾಂಕಾಂಗ್: ಚೀನ ವಿರುದ್ಧ ಹಾಂಕಾಂಗ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಪೊಲೀಸ್ ಅಧಿಕಾರಿ ಪ್ರತಿಭಟನಾಕಾರನ ಎದೆಗೆ ಗುಂಡು ಹಾರಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೀನದಲ್ಲಿ ಕಮ್ಯೂನಿಸ್ಟ್ ಪಕ್ಷದ ಆಡಳಿತ ಜಾರಿಯಾಗಿ 70 ವರ್ಷ ಪೂರ್ತಿಗೊಂಡಿರುವ ಬಗ್ಗೆ ಬೀಜಿಂಗ್ ಮತ್ತು ಇತರ ಸ್ಥಳಗಳಲ್ಲಿ ಕಾರ್ಯಕ್ರಮಗಳು ನಡೆಯುತ್ತಿರುವಂತೆಯೇ ಹಾಂಕಾಂಗ್ನಲ್ಲಿ ಸರಕಾರಿ ವಿರೋಧಿ ಪ್ರತಿಭಟನೆ ಬಿರುಸಾಗಿದೆ.
ಹಾಂಕಾಂಗ್ನ ಸುನ್ ವಾನ್ ಜಿಲ್ಲೆಯಲ್ಲಿ ಈ ಘಟನೆಯಲ್ಲಿ ಪ್ರತಿಭಟನಾಕಾರನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಗುಂಡು ಹಾರಿದ ಸುದ್ದಿ ತಿಳಿದ ಕೂಡಲೇ ಹಿಂಸಾತ್ಮಕ ತಿರುವು ಪಡೆಯಿತು.
ಲಾಠಿ ಪ್ರಹಾರ
ಪೊಲೀಸ್ ಮತ್ತು ಇತರ ರಕ್ಷಣಾ ಪಡೆಗಳನ್ನು ಗುರಿಯಾಗಿಸಿ ಪ್ರತಿಭಟನಾಕಾರರು ದಾಳಿ ನಡೆಸಲು ಶುರು ಮಾಡಿದರು. ಅವರನ್ನು ನಿಯಂತ್ರಿಸಲು ಟಿಯರ್ ಗ್ಯಾಸ್, ಲಾಠಿ ಪ್ರಹಾರ ನಡೆಸಿದರು. ಹಾಂಕಾಂಗ್ನಲ್ಲಿ ಪ್ರಜಾಪ್ರಭುತ್ವ ಪರ ಹೋರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದೂ ಒತ್ತಾಯಿಸಿದರು. ಪ್ರಮುಖ ರಸ್ತೆಗಳಲ್ಲಿ ಮಲಗಿ ಸಂಚಾರಕ್ಕೆ ಅಡ್ಡಿಯನ್ನೂ ಉಂಟು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.