![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 2, 2019, 5:18 AM IST
ಹೊಸದಿಲ್ಲಿ: ಈ ಬಾರಿಯ ದೀಪಾವಳಿ ವೇಳೆಗೆ ಆದಾಯ ತೆರಿಗೆ ಕಾಯ್ದೆಗೆ ಸಂಬಂಧಿಸಿದಂತೆ ಕೆಲವು ತಿದ್ದುಪಡಿ ಘೋಷಣೆ ಮಾಡುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಆ.19ರಂದು ನೇರ ತೆರಿಗೆ ಸಂಹಿತೆ ಕಾರ್ಯಪಡೆ ಸಲ್ಲಿಸಿರುವ ವರದಿಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕಾರ್ಪೊರೆಟ್ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಿ, ಹೂಡಿಕೆ ಪ್ರಮಾಣ ಹೆಚ್ಚಾಗುವಂತೆ ಮಾಡಿದ ಕೇಂದ್ರ ಸರಕಾರ ಮಧ್ಯಮ ವರ್ಗದ ಕುಟುಂಬಗಳು ಹೆಚ್ಚಿನ ರೀತಿಯಲ್ಲಿ ವೆಚ್ಚ ಮಾಡುವುದರ ಬಗ್ಗೆ ಮಾರ್ಗೋಪಾಯ ಜಾರಿ ಮಾಡುವ ನಿಟ್ಟಿನಲ್ಲಿರುವ ಪ್ರಯತ್ನ ಇದಾಗಿದೆ. ಅದಕ್ಕಾಗಿ ವಿತ್ತ ಸಚಿವಾಲಯದ ಅಧಿಕಾರಿಗಳು 50 ವರ್ಷ ಹಳೆಯದಾಗಿರುವ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
ತೆರಿಗೆ ಪಾವತಿದಾರನಿಗೆ ಶೇ.5ರಷ್ಟು ಅನುಕೂಲ ವಾಗುವ ನಿಟ್ಟಿನ ಘೋಷಣೆಯಾಗುವ ಸಾಧ್ಯತೆಗಳಿವೆ. ಸದ್ಯ 5 ಲಕ್ಷ ರೂ.ಗಳಿಂದ 10 ಲಕ್ಷ ರೂ. ಆದಾಯ ಇರುವವರಿಗೆ ಶೇ.20 ಇರುವ ತೆರಿಗೆ ಪ್ರಮಾಣವನ್ನು ಶೇ.10ಕ್ಕೆ ಇಳಿಕೆ, ಸೆಸ್, ಸರ್ಚಾರ್ಜ್ ತೆಗೆದು ಹಾಕುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಜತೆಗೆ ಶೇ.30ರಿಂದ ಶೇ.25ಕ್ಕೆ ತೆರಿಗೆ ಪ್ರಮಾಣ ತಗ್ಗಿಸುವ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ.
You seem to have an Ad Blocker on.
To continue reading, please turn it off or whitelist Udayavani.