ಯೋಧ ಹುತಾತ್ಮ: ಸಾಂತ್ವನ ಹೇಳಲು ಬಾರದ ಜನಪ್ರತಿನಿಧಿಗಳು; ಗ್ರಾಮಸ್ಥರ ತೀವ್ರ ಆಕ್ರೋಶ
Team Udayavani, Oct 2, 2019, 1:18 PM IST
ಹುಬ್ಬಳ್ಳಿ: ವೀರಯೋಧ ಮಂಜಪ್ಪ ಓಲೇಕಾರ ಹುತಾತ್ಮರಾದ ಹಿನ್ನಲೆಯಲ್ಲಿ ಗ್ರಾಮಕ್ಕೆ ಜನಪ್ರತಿನಿಧಿಗಳು ಆಗಮಿಸದ್ದರಿಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರ ಜೊತೆಗೆ ನಡೆದ ಗುಂಡಿನ ದಾಳಿಯಲ್ಲಿ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದ ಮಂಜುನಾಥ ಹನುಮಂತಪ್ಪ ಓಲೇಕಾರ (29) ಎಂಬ ಯೋಧ ಹುತಾತ್ಮರಾಗಿದ್ದರು. 20ನೇ ವರ್ಷದಲ್ಲಿ ಯೋಧನಾಗಿ ಸೇವೆ ಆರಂಭಿಸಿದ್ದ ಅವರು, 6 ತಿಂಗಳ ಹಿಂದಷ್ಟೇ ವಿವಾಹವಾಗಿ ಕರ್ತವ್ಯಕ್ಕೆ ಮರಳಿದ್ದರು. ಹುತಾತ್ಮ ಯೋಧ ಮಂಜುನಾಥ ಕಳೆದ 9 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.
ಹುತಾತ್ಮರಾದ ಹಿನ್ನಲೆಯಲ್ಲಿ ಸಾಂತ್ವಾನ ಹೇಳಲು ಗ್ರಾಮಕ್ಕೆ ಶಾಸಕರು, ಸಂಸದರು ಬಾರದೆ ವೀರಯೋಧನಿಗೆ ಅವಮಾನ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ, ಕೇಂದ್ರ ಸಚಿವ ಹುಬ್ಬಳ್ಳಿಯಲ್ಲಿದ್ದರೂ ಆಗಮಿಸಿಲ್ಲ ಎಂದು ಗ್ರಾಮಸ್ಥರ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಒಂದು ಗಂಟೆ ಸಮಯ ನೀಡಿರುವ ಗ್ರಾಮಸ್ಥರು. ಜನಪ್ರತಿನಿಧಿಗಳು ಬಾರದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಚಿಂತನೆ ನಡೆಸಿದ್ದಾರೆ. ಗ್ರಾಮದ ಹುತಾತ್ಮ ಯೋಧನ ನಿವಾಸದ ಎದುರು ಅಂತಿಮ ದರ್ಶನಕ್ಕೆ ಸಿದ್ದತೆ ನಡೆಸಲಾಗಿದ್ದು, ಗ್ರಾಮದ ಶಾಲೆ ಪಕ್ಕದಲ್ಲಿ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.