4ನೇ ಟಿ20: ದಕ್ಷಿಣ ಆಫ್ರಿಕಾಕ್ಕೆ 51 ರನ್‌ ಸೋಲು

ಶೆಫಾಲಿ ಮಿಂಚಿನಾಟ; ಭಾರತಕ್ಕೆ ಸರಣಿ

Team Udayavani, Oct 2, 2019, 8:05 PM IST

x-7

ಸೂರತ್‌: ಹದಿನೈದರ ಹರೆಯದಲ್ಲೇ ಟೀಮ್‌ ಇಂಡಿಯಾಗೆ ಪದಾರ್ಪಣೆ ಮಾಡಿ ಭಾರತದ ಪರ ಆಡಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಶೆಫಾಲಿ ವರ್ಮಾ ತಮ್ಮ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟ್‌ ಆಗಿದ್ದರು. ಆದರೆ, ಮಂಗಳವಾರ ರಾತ್ರಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ 4ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಶೆಫಾಲಿ ಮ್ಯಾಚ್‌ ವಿನ್ನಿಂಗ್‌ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 17 ಓವರ್‌ಗಳಲ್ಲಿ 4 ವಿಕೆಟಿಗೆ 140 ರನ್‌ ಪೇರಿಸಿ ಸವಾಲಿನ ಮೊತ್ತ ದಾಖಲಿಸಿತು. ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ಶೆಫಾಲಿ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ ಒಳಗೊಂಡ 46 ರನ್‌ ಗಳಿಸಿ ಅರ್ಧಶತಕದಿಂದ ವಂಚಿತರಾದರು.

ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ಮಹಿಳಾ ತಂಡ 17 ಓವರ್‌ಗಳಲ್ಲಿ 7 ವಿಕೆಟಿಗೆ 89 ರನ್‌ಗಳಿಸಲಷ್ಟೆ ಶಕ್ತವಾಗಿ 51 ರನ್‌ಗಳ ಹೀನಾಯ ಸೋಲುಂಡಿತ್ತು. ಭಾರತದ ಪರ ಅನುಭವಿ ಲೆಗ್‌ ಸ್ಪಿನ್ನರ್‌ ಪೂನಮ್‌ ಯಾದವ್‌ 13 ರನ್ನಿಗೆ 3 ವಿಕೆಟ್‌ ಪಡೆದು ಯಶಸ್ವಿ ಬೌಲರ್‌ ಎನಿಸಿದರು. ರಾಧಾ ಯಾದವ್‌ 16 ರನ್ನಿಗೆ 2 ವಿಕೆಟ್‌ ಕಿತ್ತು ಅವರಿಗೆ ಉತ್ತಮ ಸಾಥ್‌ ನೀಡಿದರು.

ಈ ಜಯದೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಸರಣಿಯ 2ನೇ ಮತ್ತು 3ನೇ ಪಂದ್ಯಗಳು ಮಳೆಯಿಂದಾಗಿ ಒಂದು ಎಸೆತ ಕಾಣದೆ ರದ್ದಾಗಿದ್ದವು. ಸರಣಿಯ ಕೊನೆಯ ಪಂದ್ಯ ಶುಕ್ರವಾರ (ಅ. 4) ಸೂರತ್‌ನಲ್ಲಿ ನಡೆಯಲಿದೆ.

ಟಿ20 ಕ್ರಿಕೆಟ್‌ ಸರಣಿ ಬಳಿಕ ವಡೋದರದಲ್ಲಿ 3 ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌
ಭಾರತ : 17 ಓವರ್‌ಗಳಲ್ಲಿ 140/4 (ಶೆಫಾಲಿ ವರ್ಮಾ 46, ಜೆಮಿಮಾ ರೋಡ್ರಿಗಸ್‌ 33, ನ್ಯಾಡಿನಿ ಡಿ’ಕ್ಲಾರ್ಕ್‌ 22ಕ್ಕೆ 2).
ದಕ್ಷಿಣ ಆಫ್ರಿಕಾ: 17 ಓವರ್‌ಳಲ್ಲಿ 89/7 (ಎಲ್‌ ವೊಲ್ವಾರ್ಡ್‌ 23, ಪೂನಮ್‌ ಯಾದವ್‌ 13ಕ್ಕೆ 3) ಪಂದ್ಯ ಶ್ರೇಷ್ಠೆ: ಪೂನಮ್‌ ಯಾದವ್‌.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.