ಕಡಿಯಾಳಿ: ಅ. 5ರಂದು “ಉಡುಪಿ ದಾಂಡಿಯಾ-2019′ ನೃತ್ಯ
Team Udayavani, Oct 3, 2019, 5:37 AM IST
ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಡಿಯಾಳಿ ಆಶ್ರಯದಲ್ಲಿ ಸಹಸಂಸ್ಥೆಗಳಾದ ಮಹಿಳಾ ಮಂಡಳಿ, ಅವಿಘ್ನ ವ್ಯಾಘ್ರಾಸ್ ಅವರಿಂದ ಕಡಿಯಾಳಿ ಯು. ಕಮಲಾ ಬಾೖ ಪ್ರೌಢಶಾಲಾ ವಠಾರದಲ್ಲಿ ಅ. 5ರ ಸಂಜೆ 5ರಿಂದ ರಾತ್ರಿ 10ರ ತನಕ “ಉಡುಪಿ ದಾಂಡಿಯಾ-2019′ ನೃತ್ಯ ಪ್ರದರ್ಶನಗೊಳ್ಳಲಿದೆ.
ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಸ್ಕೌಟ್/ಗೈಡ್ಸ್ ಆಯುಕ್ತೆ ಶಾಂತಾ ವಿ.ಎಸ್. ಆಚಾರ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಯಾಗಿ ಮಣಿಪಾಲ ಪವರ್ ಸಂಸ್ಥೆಯ ಅಧ್ಯಕ್ಷೆ ಶ್ರುತಿ ಜಿ. ಶೆಣೈ, ಸಂಯೋಜಕರಾಗಿ ಶಿಲ್ಪಾ ರಘುಪತಿ ಭಟ್ ಭಾಗವಹಿಸಲಿದ್ದಾರೆ ಎಂದು ಸಮಿತಿಯ ಪ್ರಕಟನೆ ತಿಳಿಸಿದೆ.
ಮಹಿಳೆಯರು ಮಾತ್ರ
ದಾಂಡಿಯಾ ಕಾರ್ಯಕ್ರಮದಲ್ಲಿ ನೃತ್ಯ ಮಾಡಲು ಮಹಿಳೆಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉತ್ತಮ ನೃತ್ಯ, ಉತ್ತಮ ಉಡುಗೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಪ್ರೇಕ್ಷಕರ ವಾಹನಗಳ ಪಾರ್ಕಿಂಗ್‌ಗೆ ಕಡಿಯಾಳಿ ಹಿ.ಪ್ರಾ.ಶಾಲಾ ಮೈದಾನದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಮಹಿಳೆಯರು, ಯುವತಿಯರು, ಹೆಣ್ಮಕ್ಕಳು ಸೇರಿ ಗುಂಪು ನೃತ್ಯ ಮಾಡಲಿದ್ದಾರೆ.
ಕಾರ್ಯಕ್ರಮ ಯಶಸ್ಸಿಗಾಗಿ ಮಹಿಳಾ ಮಂಡಳಿ ನೇತೃತ್ವದಲ್ಲಿ ಕಳೆದ ತಿಂಗಳಿಂದ ತರಬೇತಿ ನಡೆಯುತ್ತಿದೆ. ಪುರುಷರಿಗೆ ಕಾರ್ಯಕ್ರಮ ವೀಕ್ಷಿಸಲು ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.