ಪ್ರವಾಹ ಪರಿಸ್ಥಿತಿ ವೀಕ್ಷಣೆ ವೇಳೆ ನೀರಿಗೆ ಬಿದ್ದ ಬಿಜೆಪಿ ಸಂಸದ: ವಿಡಿಯೋ ವೈರಲ್
"ಹಿಡ್ಕೊಳ್ರೋ ಹಿಡ್ಕೊಳ್ರೀ "ಎಂದು ಮೊರೆಯಿಟ್ಟ ಸಂಸದ
Team Udayavani, Oct 3, 2019, 8:44 AM IST
ಪಾಟ್ನಾ: ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ತಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ಸ್ಥಳೀಯರು ಅವರನ್ನು ನೀರಿನಿಂದ ಮೆಲಕ್ಕೆತ್ತಿ ರಕ್ಷಿಸಿದ್ದಾರೆ.
ಪಾಟಲಿಪುರ ಕ್ಷೇತ್ರದ ಸಂಸದರಾಗಿರುವ ರಾಮ್ ಕೃಪಾಲ್ ಯಾದವ್ ಬೋಟ್ ಮೇಲೆ ನಿಂತು ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿ ವೀಕ್ಷಣೆ ಮಾಡುತ್ತಿದ್ದರು. ಜೊತೆಗೆ ಹಲವು ಜನರು ಕೂಡ ನಿಂತಿದ್ದರು. ಈ ವೇಳೆ ಆಯತಪ್ಪಿದ್ದ ಬೋಟ್ ಮಗುಚಿಕೊಂಡಿತು. ಪರಿಣಾಮವಾಗಿ ಸಂಸದರು ಸೇರಿದಂತೆ ಹಲವರು ನೀರಿನೊಳಗೆ ಬಿದ್ದಿದ್ದರು.
ಇದೇ ವೇಳೆ ನಿತೀಶ್ ಕುಮಾರ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು. ಪ್ರವಾಹ ಪೀಡಿತ ಗ್ರಾಮೀಣ ಪ್ರದೇಶಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಆಹಾರದ ಕೊರತೆಯಿಂದಾಗಿ ಜನರು ಬಳಲುತ್ತಿದ್ದಾರೆ. ಜಾನುವಾರುಗಳು ನೀರುಪಾಲಾಗಿವೆ. ಜನರನ್ನು ರಕ್ಷಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಲು ದೋಣಿಯ ವ್ಯವಸ್ಥೆ ಕೂಡ ಮಾಡಿರಲಿಲ್ಲ. ಅದ್ದರಿಂದ ಅನಿವಾರ್ಯವಾಗಿ ಬಿದಿರಿನಿಂದ ಮಾಡಿದ ಸಣ್ಣ ಬೋಟ್ ಅನ್ನು ಅವಲಂಬಿಸಬೇಕಾಯಿತು. ಇದರಿಂದಲೇ ಆಯತಪ್ಪಿ ಬೀಳುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
#WATCH Bihar: BJP MP Ram Kripal Yadav falls into the water after the makeshift boat he was in, capsized in Masaurhi, Patna district, during his visit to the flood affected areas yesterday. He was later rescued by the locals. (02.10.2019) pic.twitter.com/iwI4OdNGiH
— ANI (@ANI) October 3, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.