ಬ್ಯಾಂಕ್‌ಗಳ ಸೇವೆ ಜನಸಾಮಾನ್ಯರತ್ತ
Team Udayavani, Oct 4, 2019, 4:30 AM IST
ಉಡುಪಿ/ಮಂಗಳೂರು: ಸಿಂಡಿಕೇಟ್ ಬ್ಯಾಂಕ್, ಇತರ ಬ್ಯಾಂಕ್‌ಗಳು ದೇಶಾದ್ಯಂತ 400 ಜಿಲ್ಲೆಗಳಲ್ಲಿ 2 ಹಂತಗಳಲ್ಲಿ ಗ್ರಾಹಕರನ್ನು ತಲುಪುವ ಶಿಬಿರ ನಡೆಸುತ್ತಿವೆ. ಮೊದಲ ಹಂತದಲ್ಲಿ ಗ್ರಾಹಕರಿಗೆ ಸುಲಭದಲ್ಲಿ ಸಾಲ ಪಡೆಯುವಂತಾಗಲು 250 ಜಿಲ್ಲೆಗಳಲ್ಲಿ ಅ. 3ರಿಂದ 7ರ ವರೆಗೆ ಶಿಬಿರ ನಡೆಯಲಿದೆ. 14 ಜಿಲ್ಲೆಗಳಲ್ಲಿ ನಡೆ ಯುವ ಕಾರ್ಯಕ್ರಮದ ಆತಿಥೇಯತ್ವ ಸಿಂಡಿಕೇಟ್ ಬ್ಯಾಂಕ್ ವಹಿಸಿಕೊಂಡಿದೆ.
ದ.ಕ., ಉಡುಪಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಂಡಿಕೇಟ್ ಬ್ಯಾಂಕ್ ಲೀಡ್ ಬ್ಯಾಂಕ್ ಆಗಿ ಕಾರ್ಯಕ್ರಮದ ನೇತೃತ್ವ ವಹಿಸಿದೆ. ಅ. 5, 6ರಂದು ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ಕಾರ್ಯಕ್ರಮ ಜರಗಲಿದೆ. ದ.ಕ. ಜಿಲ್ಲಾ ಕಾರ್ಯಕ್ರಮ ಮಂಗಳೂರಿನ ಟೌನ್ ಹಾಲ್‌ನಲ್ಲಿ ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮ ಮಣಿಪಾಲದ ಗೋಲ್ಡನ್ ಜುಬಿಲಿ ಹಾಲ್‌ನಲ್ಲಿ ನಡೆಯಲಿದೆ. ಅ. 5ರ ಬೆಳಗ್ಗೆ 10ಕ್ಕೆ ಶಿಬಿರ ಆರಂಭವಾಗಲಿದೆ.
ಸಾಮಾನ್ಯ ಗ್ರಾಹಕರನ್ನು ತಲುಪುವ ಶಿಬಿರವನ್ನು ವಿಸ್ತೃತ ಉದ್ದೇಶದೊಂದಿಗೆ ಆಯೋಜಿಸಲಾಗಿದೆ. ಸಾರ್ವಜನಿಕ ರಂಗದ ಬ್ಯಾಂಕ್‌ಗಳಲ್ಲಿ ಖಾಸಗಿ ವಲಯದ ಬ್ಯಾಂಕ್‌ಗಳು, ಎನ್‌ಬಿಎಫ್ಸಿ, ಎಚ್‌ಎಫ್ಸಿ, ಸಿಡಿº, ನಬಾರ್ಡ್‌ಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿವೆ. ಎಲ್ಲ ಬ್ಯಾಂಕುಗಳು ಉಳಿತಾಯ ಖಾತೆ ತೆರೆಯುವುದು, ಹಣಕಾಸು ನೆರವು ಕೊಡುವುದು, ವಿತ್ತೀಯ ಒಳಗೊಳ್ಳುವಿಕೆ, ಡಿಜಿಟಲ್ ಬ್ಯಾಂಕ್ ಉತ್ಪನ್ನಗಳ ಬಗ್ಗೆ ಗ್ರಾಹಕರಿಗೆ ಪರಿಚಯಿಸುವುದೂ ಸಹಿತ ಒಂದೇ ಕಡೆ ಆರ್ಥಿಕ, ಆರ್ಥಿಕೇತರ ಸೇವೆಗಳನ್ನು ಒದಗಿಸಲಿದೆ. ಬ್ಯಾಂಕ್‌ಗಳ ವಿವಿಧ ಸೇವೆಗಳನ್ನು ಜನರಿಗೆ ಪರಿಚಯಿಸುವುದೇ ಮುಖ್ಯ ಗುರಿಯಾಗಿದೆ ಎಂದು ಸಿಂಡ್ ಬ್ಯಾಂಕ್ ಆಡಳಿತ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.