ಇ.ಡಿ.ಯಿಂದ ಡಿ.ಕೆ.ಸುರೇಶ್ ವಿಚಾರಣೆ
Team Udayavani, Oct 4, 2019, 5:01 AM IST
ಹೊಸದಿಲ್ಲಿ: ಕರ್ನಾಟಕದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸಹೋದರ ಡಿ.ಕೆ. ಸುರೇಶ್ ಅವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ.) ಕಚೇರಿಗೆ ವಿಚಾರಣೆಗೆ ಹಾಜರಾದರು.
ಈ ಹಿಂದೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿರುವ ಕೆಲವು ನಾಯಕರಿಗೆ ಹವಾಲಾ ಮಾರ್ಗಗಳ ಮೂಲಕ ಬೆಂಗಳೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಸಂಸದರೂ ಆಗಿರುವ ಸುರೇಶ್ ಹಣ ಸಂದಾಯ ಮಾಡಿರುವ ಆರೋಪಗಳು ಕೇಳಿಬಂದಿದ್ದವು. ಅದರ ಜತೆಗೆ 2019ರ ಲೋಕಸಭಾ ಚುನಾವಣೆ ವೇಳೆ ಸುರೇಶ್ ಅವರು ಘೋಷಿಸಿಕೊಂಡಿದ್ದ ಆಸ್ತಿಯ ಮೊತ್ತ (338 ಕೋ. ರೂ.), 2014ರ ಚುನಾವಣೆ ವೇಳೆ ಘೋಷಿಸಿಕೊಂಡಿದ್ದ ಆಸ್ತಿಯ ಮೊತ್ತಕ್ಕಿಂತ (85 ಕೋ. ರೂ.) ಸುಮಾರು 4 ಪಟ್ಟು ಹೆಚ್ಚಾಗಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಅವರನ್ನು ಕರೆದು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇ.ಡಿ. ಕಚೇರಿಯೊಳಗೆ ಪ್ರವೇಶಿಸುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಸುರೇಶ್, ನಾನು ಯಾವುದೇ ಅಪರಾಧ ಮಾಡಿಲ್ಲ. ತನಿಖಾಧಿಕಾರಿಗಳು ಕೇಳುವ ಎಲ್ಲ ಪ್ರಶ್ನೆಗಳನ್ನು ಸಮರ್ಥವಾಗಿ ಎದುರಿಸುತ್ತೇನೆ. ತನಿಖೆಗೆ ಸಹಕರಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.