ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ
Team Udayavani, Oct 4, 2019, 5:25 PM IST
ಹಗರಿಬೊಮ್ಮನಹಳ್ಳಿ.: ದೇಶದಲ್ಲಿ ಜನಸಂಖ್ಯಾ ಸ್ಫೋಟದಿಂದ ಆಹಾರ ಭದ್ರತೆ ಕೂಡ ಅಭದ್ರತೆಯಲ್ಲಿದೆ ಎಂದು ಬಳ್ಳಾರಿ ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಹಗರಿ ಐ.ಸಿ.ಆರ್.ಕೃಷಿ ವಿಜ್ಞಾನ ಕೇಂದ್ರ, ಬಳ್ಳಾರಿ ಮತ್ತು ಹಗರಿಬೊಮ್ಮನಹಳ್ಳಿ ಕೃಷಿ ಇಲಾಖೆಯಿಂದ ಏರ್ಪಡಿಸಿದ್ದ ಜಲಶಕ್ತಿ ಅಭಿಯಾನ ಮತ್ತು ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಲಶಕ್ತಿ ಪ್ರತಿಯೊಂದು ಜೀವರಾಶಿಗೂ ಮಹಾಶಕ್ತಿಯಾಗಿದೆ. ಇಂದು ಪ್ರತಿಯೊಂದು ಹನಿ ನೀರು ಕೂಡ ಅಮೂಲ್ಯವಾಗಿದೆ. ಜಲ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದರು.
ಕೃಷಿ ಇಲಾಖೆ ಕೃಷಿ ಸಹಾಯಕ ನಿರ್ದೇಶಕ ಜೀವನ್‌ಸಾಬ್ ಮಾತನಾಡಿ, ಹೆಚ್ಚು ಕೊಳವೆ ಬಾವಿ ಕೊರೆಸುವುದರಿಂದ ಅಂತರ್ಜಲ ಕುಸಿತ ಹೆಚ್ಚಾಗಿದೆ. ಕೆರೆ ಕಟ್ಟೆಗಳನ್ನು ಸಂರಕ್ಷಿಸಿ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಬೇಕು ಎಂದರು. ತಾ.ಪಂ ಕಾರ್ಯನಿರ್ವಾಹಕ ಅಧಿ ಕಾರಿ ವಿಶ್ವನಾಥ, ಹಗರಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ರವಿಶಂಕರ, ರಫೀ ಅಹಮ್ಮದ ರೈತರನ್ನು ಉದ್ದೇಶಿಸಿ ಮಾತನಾಡಿದರು. ಸಸಿಗೆ ನೀರು ಹಾಕುವುದರ ಮೂಲಕ ತಾ.ಪಂ ಅಧ್ಯಕ್ಷೆ ಕೆ.ನಾಗಮ್ಮ ಚಾಲನೆ ನೀಡಿದರು. ತಾ.ಪಂ ಉಪಾಧ್ಯಕ್ಷೆ ಕೊಚಾಲಿ ಸುಶೀಲಮ್ಮ ಮಂಜುನಾಥ, ಜಿ.ಪಂ ಸದಸ್ಯೆ ಶಾರದಮ್ಮ ಶೇಖರಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಶಿವಾನಂದಪ್ಪ, ಮಂಜುನಾಥ ಗೌಡ, ಬಿಜೆಪಿ ಮುಖಂಡ ಕಲ್ಲಹಳ್ಳಿ ನಿಂಗಪ್ಪ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ಪಶು ಸಹಾಯಕ ನಿರ್ದೇಶಕ ಡಾ.ದೇವಗಿರಿ, ತಾಪಂ ಉಮೇಶ ಗೌಡ, ಕೃಷಿ ತಾಂತ್ರಿಕ ಅಧಿಕಾರಿ ನಾಗರಾಜ್, ಕೃಷಿ ಅಧಿಕಾರಿ ಹನುಮಂತಪ್ಪ, ತಾಲೂಕು ಆತ್ಮ ಯೋಜನೆಯ ಅನುಷ್ಠಾನಾಧಿಕಾರಿ ಭೋಜಾನಾಯ್ಕ ಇತರರಿದ್ದರು. ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ ತಾಲೂಕಿನ ರೈತರು ಭಾಗವಹಿಸಿ ಕೃಷಿ ಮಾಹಿತಿಯನ್ನು ಪಡೆದುಕೊಂಡರು. ಹೊಸಪೇಟೆ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ, ಶಿಕ್ಷಕ ಪರಮೇಶ್ವರಯ್ಯ ಸೊಪ್ಪಿನಮಠ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.