ಸರ್ಕಾರಿ ಕಚೇರಿ ಮೇಲ್ಛಾವಣಿ ಕುಸಿಯುವ ಭೀತಿ


Team Udayavani, Oct 5, 2019, 5:58 PM IST

rn-tdy-1

ಮಾಗಡಿ: ಸರ್ವೇ ಮತ್ತು ಚುನಾವಣೆ ಇಲಾಖೆ ಕಚೇರಿಯ ಮೇಲ್ಛಾವಣೆ ಅಕ್ಷರಃ ಕುಸಿಯುತ್ತಿದೆ. ಕೂಡಲೇ ತಾಲೂಕು ಆಡಳಿತ ಎಚ್ಚೆತ್ತುಕೊಳ್ಳದಿದ್ದರೆ ನಿಜಕ್ಕೂ ಅಲ್ಲಿನ ಮಹತ್ವದ ದಾಖಲೆಗಳು ನಾಶವಾಗುವ ಆಂತಕವಿದೆ.

ಮಾಗಡಿ ಪಟ್ಟಣದ ಮಿನಿ ವಿಧಾನ ಸೌಧ ಎಂದೇ ಕರೆಯಲ್ಪಡುವ ಕಂದಾಯ ಕಚೇರಿಯ ಮೇಲಿರುವ ಚುನಾವಣಾ ಶಾಖೆ ಮತ್ತು ಸರ್ವೇ ಇಲಾಖೆ ಕಚೇರಿಯ ಮೇಲ್ಛಾವಣಿ ದಿನೇ ದಿನೇ ಕಳಚಿ ಬೀಳುತ್ತಿದೆ. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಅಲ್ಲಿನ ಕೆಲಸಕ್ಕೆಂದು ಬರುವ ಸಾರ್ವಜನಿಕರು ಭಯದಿಂದಲೇ ಕಚೇರಿಗೆ ಆಗಮಿಸುತ್ತಿದ್ದಾರೆ. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕನಿಷ್ಠ ತಲೆಗೆ ರಕ್ಷಾಕವಚ (ಹೆಲ್ಮೆಟ್‌) ಹಾಕಿಕೊಂಡರೆ ಅಪಾಯದಿಂದ ಪಾರಗಬಹುದು. ಯಾವಾಗಬೇಕಾದರೂ ಮೇಲ್ಛಾವಣಿ ಕುಸಿಯಬಹುದು ಎಂಬ ಆತಂಕ ಸಾರ್ವಜನಿಕರಲ್ಲಿಯೇ ಕಾಡುತ್ತಿದೆ.

ಮಳೆ ನೀರಿನಿಂದ ಮೇಲ್ಛಾವಣಿ ಒದ್ದೆ: ಮಾಗಡಿ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಕಚೇರಿ ಮೇಲ್ಛಾವಣಿ ಮೇಲೆ ಕಳೆ, ಗಿಡಗಂಟಿ ಬೆಳೆದು ನಿಂತಿದೆ. ಹೀಗಾಗಿ ಮಳೆ ನೀರಿನಿಂದ ಸರ್ಕಾರಿ ಕಚೇರಿಯ ಮೇಲ್ಛಾವಣೆ ಒದ್ದೆಯಾಗುತ್ತಿದೆ. ನೀರಿನಿಂದ ಕೊಠಡಿಯ ಒಳಗೆ ಕಾಂಕ್ರೀಟ್‌ ಕಳಚಿ ಬೀಳುತ್ತಿದೆ. ಕಳೆದ ದಿನವಷ್ಟೆ ಕಚೇರಿ ಮೇಲ್ಛಾವಣಿ ಕಳಚಿ ಬಿದ್ದಿದ್ದು, ಯಾವುದೇ ತೊಂದರೆಯಾಗಿಲ್ಲ. ನಿತ್ಯ ಬೀಳುತ್ತಿರುವ ಮಳೆಗೆ ಕಚೇರಿಯ ಕೊಠಡಿಯಲ್ಲಿರುವ ಭೂಮಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಮಳೆ ನೀರಿನಿಂದ ಒದ್ದೆಯಾಗಿ ನಾಶವಾಗುವ ಆತಂಕ ಸಾರ್ವಜನಿಕರಲ್ಲಿ ಕಾಡುತ್ತಿದೆ. ಜೊತೆಗೆ ಚುನಾವಣಾ ಶಾಖೆಯಲ್ಲಿನ ದಾಖಲೆಗಳು ಸಹ ನಾಶವಾಗಬಹುದು. ಜೊತೆಗೆ ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೂ ಅಪಾಯವಾಗುವ ಆತಂಕವಿದೆ.

ಭಯದಲ್ಲಿಯೇ ಕರ್ತವ್ಯ ನಿರ್ವಹಣೆ: ಕಚೇರಿ ಮೇಲ್ಛಾವಣಿ ಕಳಚಿ ಬೀಳುವ ಭಯದಲ್ಲಿಯೇ ಅಲ್ಲಿನ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಧಿಕಾರಿಗಳು ಸಹ ಅಪಾಯ ಸಂಭವ ಸುಳಿವಿದ್ದರೂ ಭಯದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸರ್ವೇ ಇಲಾಖೆಯಲ್ಲಿ ಅಗತ್ಯ ದಾಖಲೆಗಳನ್ನು ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ಸಹ ಬಿರುಕು ಬಿಟ್ಟ ಮೇಲ್ಛಾವಣೆಯ ಕೆಳಗೆ ಕುಳಿತುಕೊಳ್ಳುತ್ತಿದ್ದಾರೆ. ಜೋರಾಗಿ ಮಳೆ ಬಿದ್ದರೆ ಕಚೇರಿ ಮೇಲ್ಛಾವಣಿ ಅಕ್ಷರಃ ಕುಸಿಯುತ್ತದೆ. ಅಪಾಯ ಸಂಭವವೇ ಹೆಚ್ಚಾಗಿದೆ.

ಕಚೇರಿ ಮೇಲ್ಛಾವಣಿ ದುರಸ್ತಿಪಡಿಸಿ: ಕಂದಾಯ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ವಹಿಸಿಕೊಂಡು ಸರ್ಕಾರಿ ಕಚೇರಿಯ ಮೇಲ್ಛಾವಣೆ ದುರಸ್ತಿಪಡಿಸಬೇಕು. ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ. ಜಾಗೃತರಾಗಿ ಮಹತ್ವದ ದಾಖಲೆಗಳನ್ನು ಉಳಿಸಿ, ಅಧಿಕಾರಿಗಳು, ಸಿಬ್ಬಂದಿ ನೆಮ್ಮದಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವ ವಾತಾವರಣ ನಿರ್ಮಿಸಬೇಕಿದೆ.

ಕಂದಾಯ ಇಲಾಖೆ ಕಚೇರಿ ಕಟ್ಟಡ ಶಿಥಿಲವಾಗಿದೆ. ನೂತನ ಕಟ್ಟಡ ನಿರ್ಮಿಸಲು ಸರ್ಕಾರ 10 ಕೋಟಿ ರೂ. ಅನುದಾನ ಮೀಸಲಿಟ್ಟಿದೆ. ಈ ಕುರಿತು ಶಾಸಕರೊಂದಿಗೆ ಚರ್ಚಿಸಲಾಗುವುದು.●ಎನ್‌.ರಮೇಶ್‌, ತಹಶೀಲ್ದಾರ್‌, ಮಾಗಡಿ

 

ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.