ವನ್ಯಜೀವಿ ಸಂರಕ್ಷಣೆ ನಮ್ಮ ಹೊಣೆ: ವಿಪನ್‌ಸಿಂಗ್‌

Team Udayavani, Oct 6, 2019, 3:00 AM IST

vanyajivi

ಆನೇಕಲ್‌: ನಮ್ಮ ಸುತ್ತ ಮುತ್ತಲಿನ ಕಾಡು, ವನ್ಯಜೀವಿಗಳ ಸಂರಕ್ಷಣೆ ನಮ್ಮ ಹೊಣೆಯಾಗಬೇಕು ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನ ಕಾರ್ಯ ನಿರ್ವಾಹಕ ನಿರ್ದೇಶಕ ವಿಪಿನ್‌ಸಿಂಗ್‌ ಹೇಳಿದರು. ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ಸಂರಕ್ಷಣೆಗಾಗಿ ನಡಿಗೆ ಎಂಬ ಧ್ಯೇಯದೊಂದಿಗೆ ಉದ್ಯಾನ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಸುತ್ತ ಮುತ್ತಲಿನ ಪರಿಸರ, ಅರಣ್ಯ, ವನ್ಯಜೀವಿಗಳ ಸಂರಕ್ಷಣೆ ಕೇಲವ ಸರ್ಕಾರ ಮತ್ತು ಅರಣ್ಯ ಇಲಾಖೆಯದ್ದು, ಎಂದು ಭಾವಿಸದೆ ಅದರ ಸಂರಕ್ಷಣೆಗೆ ನಾಗರಿಕರು ಮುಂದಾಗಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

ಜೈವಿಕ ಉದ್ಯಾನವನ ಎಂದರೆ ಪ್ರವಾಸಿಗರಿಗೆ ಮನರಂಜನೆ ನೀಡುವ ತಾಣವಲ್ಲ. ಪ್ರಾಣಿ, ಪಕ್ಷಿ, ಕೀಟಗಳ ಬಗ್ಗೆ ಮಾಹಿತಿ ನೀಡುವ ಸ್ಥಳ. ಮನುಷ್ಯ ನೆಮ್ಮದಿಯಾಗಿರ ಬೇಕಾದರೆ ನಮ್ಮ ಪರಿಸರದಲ್ಲಿ ಜೀವಿ, ಜಲಚರ, ಪ್ರಾಣಿ ಪಕ್ಷಿಗಳು ಸಮತೋಲನದಲ್ಲಿರ ಬೇಕು. ಅದರಲ್ಲೂ ಇತ್ತೀಚೆಗೆ ಹಲವು ಪಕ್ಷಗಳ ಸಂಕುಲ ನಶಿಸಿ ಹೋಗುತ್ತಿವೆ ಹಾಗಾಗಿ ಅವುಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದರು.

ವನ್ಯಜೀವಿ ಸಪ್ತಾಹದ ಹಿನ್ನಲೆಯಲ್ಲಿ ಉದ್ಯಾನವಲ್ಲಿ ನಡಿಗೆ ಸೇರಿದಂತೆ ವನ್ಯಜೀವಿ ಚಿತ್ರಕಲಾ, ಛಾಯಾಚಿತ್ರ ಸ್ಪರ್ಧೆ, ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂದು ಸುಮಾರು 50 ಕ್ಕೂ ಹೆಚ್ಚು ಪರಿಸರ ಆಸಕ್ತರು ಆಗಮಿಸಿದ್ದು, ಉದ್ಯಾನವನದ ಸಸ್ಯಹಾರಿ ಪ್ರಾಣಿಗಳ ಸಫಾರಿಯಲ್ಲಿ ಐದು ಕೀ.ಮೀ ನಡಿಗೆಯಲ್ಲಿ ಪಕ್ಷಿಗಳ ವೀಕ್ಷಣೆ, ಚಿಟ್ಟೆಗಳ ಮಾಹಿತಿ ನೀಡಲಾಯಿತು ಎಂದು ತಿಳಿಸಿದರು.

ನಡಿಗೆಯಲ್ಲಿ ಉಪ ನಿರ್ದೇಶಕ ಕುಶಾಲಪ್ಪ, ವಲಯ ಅರಣ್ಯಾಧಿಕಾರಿಗಳಾದ ಚಂದ್ರೇಗೌಡ, ಪ್ರವೀಣ್‌, ಭಾಗ್ಯಲಕ್ಷ್ಮೀ, ಶಿಕ್ಷಣಾಧಿಕಾರಿ ಅಮಲ, ಸಾರ್ವಜನಿಕ ಸಂಪರ್ಕಅಧಿಕಾರಿ ಶ್ರೀನಿವಾಸ್‌, ಅಕ್ಷರಸ್ತ ಸಹಾಯಕ ಮಧು, ಸುರೇಶ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

15-

Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.