ದಸರಾ ಹಿನ್ನಲೆಯಲ್ಲಿ ಭರ್ಜರಿ ಖರೀದಿ

Team Udayavani, Oct 6, 2019, 3:08 AM IST

dasara-hinn

ಚಿತ್ರ: ಫ‌ಕ್ರುದ್ದೀನ್‌ ಎಚ್‌.

ಬೆಂಗಳೂರು: ದಸರಾ ಪ್ರಯುಕ್ತ ನಗರದ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದ್ದು, ಬೂದುಗುಂಬಳ, ನಿಂಬೆಹಣ್ಣು ಬೆಲೆ ಗಗನಕ್ಕೇರಿದೆ. ದಸರಾಗೆ ಪ್ರತಿ ವರ್ಷ ತಮಿಳುನಾಡು, ಆಂಧ್ರಪ್ರದೇಶದಿಂದ ಬೂದಗುಂಬಳಕಾಯಿ ಮಾರುಕಟ್ಟೆಗೆ ಬರುತ್ತಿತ್ತು. ಆದರೆ ಈ ಬಾರಿ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದರಿಂದ ಬೂದಗುಂಬಳಕಾಯಿ ಪೂರೈಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳಗೊಂಡಿದೆ.

ಪ್ರತಿ ಕೆಜಿಗೆ 15 ರಿಂದ 20 ರೂ.ವರೆಗೆ ಮಾರಾಟವಾಗುತ್ತಿದ್ದ ಬೂದಗುಂಬಳ, ಈಗ 25 ರಿಂದ 30 ರೂ.ಗೆ ಏರಿದೆ. ಒಂದು ಕಾಯಿಗೆ 80 ರೂ.ನಿಂದ 120 ರೂ.ವರೆಗೆ ಬೆಲೆ ಏರಿಕೆಯಾಗಿದೆ. ನಿಂಬೆಹಣ್ಣಿನ ದರದಲ್ಲೂ ಭಾರೀ ಏರಿಕೆಯಾಗಿದ್ದು, ಸಣ್ಣ ಗಾತ್ರದ್ದು 3 ರೂ., ದಪ್ಪ ಗಾತ್ರದ್ದು 5 ರೂ. ಇದೆ. ಬಾಳೆ ಕಂದು ಕೂಡ 100 ರೂ. ಗಡಿ ದಾಟಿದೆ. ದಸರಾಗೆ ಬೂದಗುಂಬಳ, ನಿಂಬೆಹಣ್ಣು ಸಹಜವಾಗಿ ಹೆಚ್ಚಾಗಿ ಖರೀದಿಸಲಾಗುವುದು.

ಹೀಗಾಗಿ, ಮಾರುಕಟ್ಟೆಗಳಲ್ಲಿ ಡಿಮ್ಯಾಂಡ್‌ ಹೆಚ್ಚಾಗಿಯೇ ಇದೆ. ಇನ್ನು, ಕಡ್ಲೆಪುರಿ ಒಂದು ಸೇರಿಗೆ 6 ರಿಂದ 10 ರೂ.ವರೆಗೆ ಮಾರಾಟವಾಗುತ್ತಿದೆ. ಗುರುವಾರದಿಂದಲೇ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು, ಬಾಳೆ ಕಂದು, ಬೂದುಗುಂಬಳ, ಕಡ್ಲೆಪುರಿ, ತೆಂಗಿನಕಾಯಿ ಸೇರಿ ಪೂಜಾ ಸಾಮಗ್ರಿಗಳ ಮಾರಾಟ ಪ್ರಾರಂಭವಾಗಿದೆ. ಕೆ.ಆರ್‌. ಮಾರುಕಟ್ಟೆ, ಮಡಿವಾಳ, ಯಶವಂತಪುರ ಸೇರಿ ನಗರದ ವಿವಿಧ ಮಾರುಕಟ್ಟೆಗಳಲ್ಲಿ ಹೂ, ಹಣ್ಣು, ತರಕಾರಿ, ಬೂದಗುಂಬಳಕಾಯಿ, ಬಾಳೆ ಕಂದುಗಳು ರಾಶಿಗಟ್ಟಲೇ ಬಂದಿದ್ದು, ವ್ಯಾಪಾರ ಜೋರಾಗಿಯೇ ನಡೆಯುತ್ತಿದೆ.

ಹೂ ಮತ್ತು ಹಣ್ಣುಗಳ ಬೆಲೆ ಹೆಚ್ಚಳವಾಗಿದ್ದು, ಕನಕಾಂಬರ ಕೆ.ಜಿ.ಗೆ 1,200 ರೂ., ಮಲ್ಲಿಗೆ 800 ರೂ., ಸೇವಂತಿಗೆ 250 ರೂ., ಮಳ್ಳೆ ಹೂವು 800 ರೂ., ಕಾಕಡ 400 ರೂ., ಗುಲಾಬಿ 160 ರೂ., ಸು ಗಂಧ ರಾಜ 300 ರೂ. ಇದ್ದು, ಹಣ್ಣುಗಳ ಬೆಲೆಯಲ್ಲಿಯೂ ಏರಿಕೆ ಕಂಡಿದೆ.

ಎಲ್ಲೆಡೆ ಪ್ಲಾಸ್ಟಿಕ್‌ ದರ್ಬಾರ್‌: ಪ್ಲಾಸಿಕ್‌ ಕೊಳ್ಳದಿರಿ ಮತ್ತು ಮಾರಾಟ ಮಾಡದಿರಿ ಎಂದು ಬಿಬಿಎಂಪಿ ಎಷ್ಟೇ ಜಾಗೃತಿ ಮೂಡಿಸಿದರೂ, ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸಿಕ್‌ ನಿಷೇಧವಾಗಿಲ್ಲ. ದಸರಾ ಹಬ್ಬದ ಪ್ರಯುಕ್ತ ಕೆ.ಆರ್‌. ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್‌ ಬ್ಯಾಗ್‌ಗಳು ರಾರಾಜಿಸುತ್ತಿದ್ದು, ಸಾರ್ವಜನಿಕರು ರಾಜಾರೋಷವಾಗಿ ಕೊಂಡೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ. ಈ ಮಧ್ಯೆ, ಮಾರುಕಟ್ಟೆಗಳಲ್ಲಿ ಹಸಿ ತ್ಯಾಜ್ಯ ವಿಲೇವಾರಿ ಸವಾಲಾಗಿದೆ. ನಿತ್ಯ ಸಾವಿರಾರು ಟನ್‌ ಹೂವು-ಹಣ್ಣು ಹಸಿ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಸಮರ್ಪಕ ವಿಲೇವಾರಿಯಾಗದೆ ಸಾರ್ವಜನಿಕರಿಗೆ ಓಡಾಡಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.

ಹೂವಿನ ಸಗಟು ದರ (ಕೆ.ಜಿ.ಗಳಲ್ಲಿ)
ಕನಕಾಂಬರ-1,000-1200
ಮಲ್ಲಿಗೆ- 800-1000 ರೂ.
ದುಂಡು ಮಲ್ಲಿಗೆ 800-1000 ರೂ.
ಕಾಕಡ-400-500 ರೂ.
ಗುಲಾಬಿ-160-180 ರೂ.
ಸುಗಂಧ ರಾಜ-250-300 ರೂ.
ಸೇವಂತಿಗೆ 160-250 ರೂ.
ಚೆಂಡು ಹೂ ವು 30-45 ರೂ.
ಸೇವಂತಿ ಹೂವು (ಮಾರು) 60-80 ರೂ.

ಹಣ್ಣುಗಳು ದರ
ಮೊಸಂಬಿ 80-100 ರೂ.
ಸೇಬು 100-120 ರೂ.
ದ್ರಾಕ್ಷಿ 120-200 ರೂ.
ದಾಳಿಂಬೆ 160-200 ರೂ.
ಏಲಕ್ಕಿ ಬಾಳೆ 80 ರೂ.
ಪೈನಾಪಲ್‌ 80-100 ರೂ.

ಮಲ್ಲಿಗೆ, ದುಂಡು ಮಲ್ಲಿಗೆ ಹೂವು ತಮಿಳುನಾಡಿನಿಂದ ಬರುತ್ತಿದೆ. ಉಳಿದಂತೆ ಕೋ ಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ, ಆನೇಕಲ್‌ ಹೀಗೆ ಬೆಂಗಳೂರು ಸುತ್ತಮುತ್ತಲಿನಿಂದ ಮಾರುಕಟ್ಟೆಗೆ ಬರುತ್ತಿದೆ. ವ್ಯಾಪಾರ ಭರ್ಜರಿಯಾಗಿದೆ.
-ಮಹೇಶ್‌, ಕೆ.ಆರ್‌. ಮಾರುಕಟ್ಟೆಯ ಸಗಟು ಹೂವಿನ ವ್ಯಾಪಾರಿ

ಗಣೇಶ ಹಬ್ಬಕ್ಕೆ ಹೋಲಿಸಿದರೆ ಹೂಗಳ ಬೆಲೆ ಸ್ಥಿರವಾಗಿದೆ. ಆದರೆ ನಿಂಬೆಹಣ್ಣು, ಬೂದುಗುಂಬಳಕಾಯಿ, ಬಾಳೆ ಕಂದು, ಹಣ್ಣುಗಳ ಬೆಲೆ ಏರಿಕೆಯಾಗಿದೆ. ಮಳೆ ಬರುತ್ತಿರುವುದರಿಂದ ಕೊಂಡುಕೊಳ್ಳಲು ತೊಂದರೆ ಆಗುತ್ತಿದೆ.
-ಶಿವುಕುಮಾರ್‌, ಗ್ರಾಹಕ

* ಮಂಜುನಾಥ್‌ ಗಂಗಾವತಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.