ಇನ್ನೂ ಸರಿಯಾಗಿಲ್ಲ ಮ್ಯಾನ್‌ಹೋಲ್ ಸಮಸ್ಯೆ
Team Udayavani, Oct 6, 2019, 5:45 AM IST
ನಗರದಲ್ಲಿ ಮಳೆ ಬಾರದಿದ್ದರೂ, ಮ್ಯಾನ್‌ಹೋಲ್‌ನ ಒಳಗಿಂದ ನೀರು ರಸ್ತೆಗೆ ಬರುತ್ತಿದೆ. ನಗರದ ಪ್ರಮುಖ ಮಾಲ್‌ಗಳಲ್ಲಿ ಒಂದಾದ ಸಿಟಿ ಸೆಂಟರ್ ಮುಂಭಾಗ ಕಳೆದ ಕೆಲ ತಿಂಗಳಿನಿಂದ ಮ್ಯಾನ್‌ಹೋಲ್ ಒಳಗಿಂದ ನೀರು ಹೊರಬರುತ್ತಿದ್ದ ಮಾಲ್‌ಗೆ ಆಗಮಿಸುವ ಮಂದಿಗೆ ಕಿರಿ ಕಿರಿ ಎನಿಸುತ್ತಿದೆ.
ಮ್ಯಾನ್‌ಹೋಲ್ ಮೇಲೆ ಸ್ಲಾಬ್ ಅಳವಡಿಸಿದ್ದು, ಅಲ್ಲಿಂದ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಇನ್ನು, ಈ ಕೊಳಚೆ ನೀರಿನಲ್ಲಿ ವಾಹನಗಳು ಸಂಚರಿಸುತ್ತಿದ್ದು, ನಡೆದುಕೊಂಡು ಹೋಗುವ ಸಾರ್ವಜನಿಕರಿಗೆ ಇದರಿಂದ ತೊಂದರೆ ಉಂಟಾಗುತ್ತಿಲ್ಲ. ನಗರದ ಹೃದಯಭಾಗದಲ್ಲಿ ಈ ಸಮಸ್ಯೆ ಇದ್ದರೂ, ಸರಿಪಡಿಸಬೇಕಾದ ಸಂಬಂಧಪಟ್ಟ ಇಲಾಖೆ ಮಾತ್ರ ಇನ್ನೂ ಈ ಬಗ್ಗೆ ಗಮನಹರಿಸದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸಾಮಾನ್ಯವಾಗಿ ಮ್ಯಾನ್‌ಹೋಲ್‌ಗಳು ರಸ್ತೆಗೆ ಸಮನಾಂತರವಾಗಿ ಇರಬೇಕು. ನಗರದಲ್ಲಿನ ಅನೇಕ ಮ್ಯಾನ್‌ಹೋಲ್‌ಗಳು ಸುಮಾರು 50 ವರ್ಷ ಹಳೆಯದಾಗಿದ್ದು, ಅವುಗಳ ಪೈಕಿ ರಸ್ತೆಗಳ ಮೇಲಿರುವ ಹಲವು ಮ್ಯಾನ್‌ಹೋಲ್‌ಗಳು ಕೆಳಕ್ಕೆ ಕುಸಿದುಕೊಂಡು ಅಪಾಯದ ಸ್ಥಿತಿಯಲ್ಲಿವೆ. ಇದರಿಂದಾಗಿ ಮ್ಯಾನ್‌ಹೋಲ್‌ಗಳು ರಸ್ತೆ ಮಟ್ಟದಿಂದ ಸುಮಾರು ಅರ್ಧ ಅಡಿ ಕೆಳಕ್ಕೆ ಜಾರಿಗೊಂಡಿವೆ. ಈ ಕಾರಣದಿಂದಾಗಿ ಮಳೆ ಬಂದಾಗ ನೀರು ಚರಂಡಿ ಬದಲಿಗೆ ಈ ಮ್ಯಾನ್‌ಹೋಲ್‌ಗೆ ನುಗ್ಗಿ ಪಕ್ಕದ ಮ್ಯಾನ್‌ಹೋಲ್ ಮೂಲಕ ಹೊರಗಡೆ ಬಂದು ನಾನಾ ರೀತಿಯ ಸಮಸ್ಯೆಗೆ ಕಾರಣವಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.