ವರ್ಷದಲ್ಲಿ ಚಿಗರಿ ಏರಿದವರು ಬರೋಬ್ಬರಿ 1.90 ಕೋಟಿ ಜನ
Team Udayavani, Oct 6, 2019, 11:29 AM IST
ಹುಬ್ಬಳ್ಳಿ: ಹು-ಧಾ ಬಿಆರ್‌ಟಿಎಸ್ ಒಂದು ವರ್ಷ ಪೂರೈಸಿದೆ. ಈ ಅವಧಿಯಲ್ಲಿ 1.90 ಕೋಟಿ ಜನರು ಸಂಚಾರ ಮಾಡಿದ್ದು, 26.56 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ಒಂದು ವರ್ಷದಲ್ಲಿ 100 ಬಸ್‌ಗಳು 69.50 ಲಕ್ಷ ಕಿಮೀ ಸಂಚಾರ ಮಾಡಿವೆ. ಸರಾಸರಿ 1.90 ಕೋಟಿ ಜನರು ಸಂಚಾರ ಮಾಡಿದ್ದಾರೆ.
2-5 ನಿಮಿಷಕ್ಕೊಂದು ಬಸ್‌ಗಳ ಲಭ್ಯತೆಯಿದೆ. ಇದರಿಂದ ಬಿಆರ್‌ಟಿಎಸ್ ಯೋಜನೆ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸಾರಿಗೆ ಸೇವೆ ನೀಡಿದೆ. ದೇಶದಲ್ಲಿ ಹವಾನಿಯಂತ್ರಿತ ಬಸ್‌ಗಳ ಮೂಲಕ ಅತೀ ಕಡಿಮೆ ದರದಲ್ಲಿ ಸಾರಿಗೆ ಸೇವೆ ನೀಡುತ್ತಿರುವ ಮೊದಲ ಸಂಸ್ಥೆಯಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲು ಪ್ರಾಯೋಗಿಕ ಕಾರ್ಯ ನಡೆದಿದ್ದು, 2019 ನವೆಂಬರ್ ಅಂತ್ಯದೊಳಗೆ ಸಾರ್ವಜನಿಕರಿಗೆ ಲಭ್ಯವಾಗಲಿವೆ. ಸಂಚಾರ ಸುರಕ್ಷತೆ ನಿಟ್ಟಿನಲ್ಲಿ ನಾಲ್ಕು ಹಂತದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯೋಜನೆ ಆರಂಭವಾದಾಗಿನಿಂದ ಜನರು ಸಮೂಹ ಸಾರಿಗೆ ಬಳಕೆಗೆ ಹೆಚ್ಚು ಆಸಕ್ತಿ ತೋರಿದ್ದು, ಇದರಿಂದ ಮಹಾನಗರದಲ್ಲಿ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ.
ಮುಂದಿನ ಯೋಜನೆಗಳು: ಆರ್ಟಿಕ್ಯುಲೇಟೆಡ್ ಬಸ್‌ಬದಲಾಗಿ ಪರಿಸರ ಸ್ನೇಹಿ 50 ವಿದ್ಯುತ್ ಚಾಲಿತ ಬಸ್‌ಖರೀದಿ ಮಾಡಲಾಗುತ್ತಿದ್ದು, ಈ ಬಸ್‌ಗಳನ್ನು ಹೊಂದಿದ ಮೊದಲ ನಗರ ಎಂಬ ಹೆಗ್ಗಳಿಕೆ ಹು-ಧಾ ಮಹಾನಗರ ಹೊಂದಲಿದೆ. ಪ್ರಯಾಣಿಕರ ಹಾಗೂ ವಾಹನಗಳ ಸಂಚಾರದ ದೃಷ್ಟಿಯಿಂದ ಕಾರಿಡಾರ್ ಉದ್ದಕ್ಕೂ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಸೌಲಭ್ಯ ನೀಡಲಾಗುವುದು. ಹುಬ್ಬಳ್ಳಿಯ ಹೊಸೂರು ವೃತ್ತದಿಂದ ವಿಮಾನ ನಿಲ್ದಾಣದವರೆಗೆ ಹಾಗೂ ಧಾರವಾಡದ ಜ್ಯುಬಿಲಿ ವೃತ್ತದಿಂದ ಕೃಷಿ ವಿವಿವರೆಗೆ ವಿಸ್ತರಿಸಲು ಬೇಡಿಕೆ ಬಂದಿದ್ದು, ತಾಂತ್ರಿಕ ವರದಿ ಸಿದ್ಧಪಡಿಸಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಗತಿ ಹಾಗೂ ಪ್ರಯಾಣಿಕರಿಗೆ ಸಂತೃಪ್ತಿ ಸೇವೆ ನೀಡಿದೆ ಎಂದು ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.