ರಸ್ತೆ ನಿರ್ಮಾಣ ಶೀಘ್ರ ಪೂರ್ಣಗೊಳಿಸಿ
Team Udayavani, Oct 6, 2019, 5:51 PM IST
ರಾಯಬಾಗ: ಪಟ್ಟಣದ ಅಂಕಲಿ ರಸ್ತೆಯ ಅಗಲೀಕರಣಕ್ಕಾಗಿ ರಸ್ತೆಯ ಬದಿಯ ಕಟ್ಟಡಗಳನ್ನು ನೆಲಸಮಗೊಳಿಸಿ 3 ವರ್ಷಗಳಾದರೂ ಇನ್ನೂವರೆಗೆ ಮಾಸ್ಟರ್ ಪ್ಲಾನ್ ಪ್ರಕಾರ ಕಾಮಗಾರಿ ಪೂರ್ಣಗೊಳಿಸಿಲ್ಲವೆಂದು ಆರೋಪಿಸಿ ಕರವೇ ಕಾರ್ಯಕರ್ತರು ಶನಿವಾರ ಪಟ್ಟಣದ ಝೇಂಡಾಕಟ್ಟೆ ಬಳಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಕಳೆದ 3 ವರ್ಷಗಳ ಹಿಂದೆ ರಸ್ತೆಅಗಲೀಕರಣಕ್ಕಾಗಿ ಪಟ್ಟಣದ ಅಂಕಲಿ ರಸ್ತೆ ಬದಿಯ ಕಟ್ಟಡಗಳನ್ನು ನೆಲಸಮಗೊಳಿಸಿದ್ದು, ಇನ್ನುವರೆಗೆ ಕಾಮಗಾರಿ ಪೂರ್ಣಗೊಳಿಸದೇ ಇರುವುದರಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಸಾರ್ವಜನಿಕರು ಮತ್ತು ವಾಹನ ಸವಾರರ ಸಂಚಾರಕ್ಕೆ ತುಂಬಾ ತೊಂದರೆ ಆಗಿದೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಲೋಕೋಪಯೋಗಿ ಇಲಾಖೆ ಮತ್ತು ಪಟ್ಟಣ ಪಂಚಾಯತ ಅಧಿಕಾರಿಗಳು ಕಾಮಗಾರಿ ಪೂರ್ಣಗೊಳಿಸದೇ ಇರುವುದರಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಇದರಿಂದ ರಸ್ತೆ ಬದಿ ವ್ಯಾಪಾರಸ್ಥರಿಗೆ ಮತ್ತು ಸಾರ್ವಜನಿಕರಿಗೆ ತೋಂದರೆಯಾಗುತ್ತಿದೆ ಎಂದು ಆರೋಪಿಸಿದರು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜವಾಗಿಲ್ಲ. ಅಧಿಕಾರಿಗಳ ವರ್ತನೆಗೆ ಬೇಸತ್ತು ಶನಿವಾರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದಾಗಿ ತಿಳಿಸಿದರು.
ಅಧಿಕಾರಿಗಳು ನಿಯಮ ಬಾಹಿರವಾಗಿ ಕೆಲಸ ಮಾಡುತ್ತಿದ್ದಾರೆಂದು ಗಂಭೀರವಾಗಿ ಆರೋಪಿಸಿದ ಕಾರ್ಯಕರ್ತರು, ಈ ಮೊದಲು ಇದ್ದ ರಸ್ತೆ ಡಿವೈಡರ್ ದಿಂದ ಸರಿಯಾಗಿ ಎರಡು ಬದಿ ಚರಂಡಿ ಮತ್ತು ರಸ್ತೆಯನ್ನು ಎಸ್ಟಿಮೇಟ್ ಪ್ರಕಾರ ನಿರ್ಮಿಸಬೇಕೆಂದು ಆಗ್ರಹಿಸಿದರು. ಅಲ್ಲದೇ ರಾಯಬಾಗ-ಚಿಂಚಲಿ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಆಗ್ರಹಿಸಿದರು.
ರಾಯಬಾಗ-ಜಲಾಲಪುರ ರಸ್ತೆಯನ್ನು 1 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಿದ್ದು, ಈಗ ಮತ್ತೆ ರಸ್ತೆಎರಡು ಬದಿ ಕಟ್ಟಡಗಳನ್ನು ನೆಲಸಮ ಮಾಡುತ್ತಿರುವುದರಿಂದ ರಸ್ತೆ ಹಾಳಾಗಿ ಖರ್ಚು ಮಾಡಿದ ಸರಕಾರದ ಅನುದಾನ ನೀರಿನಲ್ಲಿ ಹೋಮ ಮಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಯಮದ ಪ್ರಕಾರ ಮತ್ತು ಮಾಸ್ಟರ್ ಪ್ಲಾನ್ ಪ್ರಕಾರ ಕಾಮಗಾರಿಗಳನ್ನು ಬೇಗನೆ ಮುಗಿಸದಿದ್ದರೆ ಬರುವ ದಿನಗಳಲ್ಲಿ ಲೋಕೋಪಯೋಗಿ ಮತ್ತು ಪಟ್ಟಣ ಪಂಚಾಯತಿ ಅಧಿಕಾರಿಗಳ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ ಡಿ.ಎಚ್.ಕೋಮರ, ಶೀಘ್ರ ಪಟ್ಟಣದ ರಸ್ತೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಪಟ್ಟಣದ ಝೇಂಡಾಕಟ್ಟೆ ಬಳಿ ಪ್ರತಿಭಟನಾಕಾರರು ರಸ್ತೆ ಬಂದ್ ಮಾಡಿದ್ದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಸುಮಾರು ಒಂದು ಗಂಟೆ ಕಾಲ ಪರದಾಡುವಂತಾಯಿತು. ರಸ್ತೆ ಬಂದ್ ಮಾಡಿದ್ದರಿಂದ ಸಿಪಿಐ ಮತ್ತು ಕರವೇ ಕಾರ್ಯಕರ್ತರು ನಡುವೆ ವಾಗ್ವಾದ ನಡೆಯಿತು.
ರಾಜುಗಡ್ಡಿ, ನಾರಾಯಣ ಮೇತ್ರಿ, ಅಮರ ತಾಳಿಕೋಟಿ, ರಾಜು ಕುಲಗುಡೆ, ಕಿರಣ ನಾವ್ಹಿ, ಪ್ರದೀಪ ಪಾಟೀಲ, ಮಹಾಂತೇಶ ಹಳಿಂಗಳಿ, ಬಸು ಬೆವನಮಟ್ಟಿ, ಯುವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.