ದಸರಾ ಜನೋತ್ಸವ ವಾಹನ, ಕಟ್ಟಡಗಳ ಅಲಂಕಾರ: ಸಮಿತಿ ಮನವಿ
Team Udayavani, Oct 7, 2019, 5:09 AM IST
ಮಡಿಕೇರಿ: ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ವತಿಯಿಂದ ದಸರಾ ಜನೋತ್ಸವದ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಕೆ.ನಂದೀಶ್‌ಕುಮಾರ್ ತಿಳಿಸಿದ್ದಾರೆ.
ಅ.7 ರಂದು ಆಯುಧಪೂಜೆ ಅಂಗವಾಗಿ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ನಡೆಯಲಿದೆೆ. ದೊಡ್ಡ ಲಾರಿ, ಸಣ್ಣ ಲಾರಿ, ಬಸ್, ಮಿನಿ ಬಸ್ಸು, ಕಾರ್, ಸೈಕಲ್, ಬೈಕ್, ಬಸ್, ಆಟೋ, ಟಾಟಾ ಏಸ್, ಜೀಪ್, ಪಿಕ್ ಅಪ್, ಜೆಸಿಬಿ ಗಳಿಗೆ ಅಲಂಕಾರ ಸ್ಪರ್ಧೆ ಜರಗಲಿದೆ. ಈ ಎಲ್ಲಾ ಸ್ಪರ್ಧೆಗಳನ್ನು ಅಂದು ಸಂಜೆ 7 ಗಂಟೆಯಿಂದ ರಾತ್ರಿ 8.30 ರವರೆಗೆ ಆಯೋಜಿಸಲಾಗಿದೆ ಎಂದು ನಂದೀಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.
ಕಟ್ಟಡ ಅಲಂಕಾರ
ಅ.8 ರಂದು ವಿಜಯದಶಮಿ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯಡಿ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ನಡೆಯಲಿವೆ.
ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸ್ಪರ್ಧೆಗಳು ಆಯೋಜಿತವಾಗಿವೆ. ದಸರಾದ ದಶದೇವಾಲಯಗಳು, ಸರ್ಕಾರಿ, ಅರೆಸರ್ಕಾರಿ ಕಛೇರಿಗಳು, ವಿವಿಧ ಕಟ್ಟಡಗಳು, ಚಿನ್ನದಂಗಡಿ, ಬಟ್ಟೆಯಂಗಡಿ, ಬೇಕರಿ, ಹೊಟೇಲ್, ಬ್ಯಾಂಕ್, ಅಲಂಕಾರ ಮಳಿಗೆಗಳು, ಎಲೆಕ್ಟ್ರಾನಿಕ್ಸ್ ಮಳಿಗೆಗಳು, ಔಷಧಿ ಅಂಗಡಿಗಳು, ಚಿತ್ರಮಂದಿರ, ಟೈಲರ್ ಶಾಪ್, ಪಾನಿಪೂರಿ ಅಂಗಡಿಗಳು, ಡ್ಯಾನ್ಸ್ ಕ್ಲಾಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಟ್ಟಡ ಅಲಂಕಾರ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಅಂಗಡಿ ಮಾಲೀಕರು, ಸಣ್ಣ ಮತ್ತು ದೊಡ್ಡ ಕಟ್ಟಡಗಳ ಮಾಲೀಕರು, ಸರಕಾರಿ ಅಧಿಕಾರಿಗಳು ತಮ್ಮ ತಮ್ಮ ಕಚೇರಿ, ಅಂಗಡಿ ಮಳಿಗೆ ಹಾಗೂ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಜನೋತ್ಸವವನ್ನು ಮತ್ತಷ್ಟು ಆಕರ್ಷಕಗೊಳಿಸುವಂತೆ ನಂದೀಶ್ ಕುಮಾರ್ ಅವರು ಮನವಿ ಮಾಡಿದ್ದಾರೆ.
ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ : 9449140988, 9480325167, 9448585470 ಯನ್ನು ಸಂಪರ್ಕಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.