ಅರಿವು ಮೂಡಿಸಲು ಜಾಗೃತಿ ಜಾಥಾ
Team Udayavani, Oct 7, 2019, 3:46 PM IST
ಕನಕಪುರ: ಮೋಟರ್ ವಾಹನ ಕಾಯ್ದೆ ತಿದ್ದುಪಡಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕಾನೂನು ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಭಾನುವಾರ ನಗರದಲ್ಲಿ ಜಾಗೃತಿ ಜಾಥಾ ನಡೆಯಿತು. ನಗರದ ನಗರಸಭೆ ಮುಂಭಾಗ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ನಿಂಬಣ್ಣ ಕಲ್ಕಣಿ, ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಎಚ್ ಹನುಮಂತು, ಒಂದನೇ ಸಿವಿಲ್ ನ್ಯಾಯಾಧೀಶ ಪಿ.ಎ. ಸಂತೋಷ್ ಕುಮಾರ್ ನೇತೃತ್ವದಲ್ಲಿ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.
ಸಂಚಾರ ನಿಯಮ ಪಾಲನೆ ಕಡ್ಡಾಯ: ತಾಲೂಕಿನ ಸಾತನೂರು, ಕೋಡಿಹಳ್ಳಿ, ಹಾರೋಹಳ್ಳಿ ಮತ್ತು ಗ್ರಾಮಾಂತರ ಠಾಣೆಯ ಆರಕ್ಷಕರು ದ್ವಿಚಕ್ರ ವಾಹನದಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಜಾಗೃತಿ ಜಾಥಾ ನಡೆಸಿ, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿರಬೇಕು. ಆಟೋ ಚಾಲಕರು, ಸರಕು ಸಾಗಾಣೆ ವಾಹನ ಚಾಲಕರು, ಕಾರು ಚಾಲಕರು, ಬಸ್ ಚಾಲಕರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ಕಾರು ಚಾಲಕರು ಸೀಟ್ ಬೆಲ್ಟ್ ಹಾಕಿರಬೇಕು ಎಂಬ ನಾಮಫಲಕವನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಎಲ್ಲಾ ನಿಯಮಗಳನ್ನು ಪಾಲಿಸದಿದ್ದರೆ ದಂಡ ವಿಧಿಸುವುದು ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ನಗರ ಠಾಣೆ ವೃತ್ತ ನಿರೀಕ್ಷಕ ಮಲ್ಲೇಶ್ಶ್, ಉಪನಿರೀಕ್ಷಕ ಭಗವಾನ್, ಗ್ರಾಮಾಂತರ ಠಾಣೆ ಎಸ್‌ಐ ಭಾಸ್ಕರ್, ಹಿರಿಯ ವಕೀಲ ರಾಮಚಂದ್ರು ಕಾಮೇಶ್, ಸರ್ಕಾರಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.