KSRTC ಚಾಲಕ, ನಿರ್ವಾಹಕರ ಕ್ಷಮೆ ಕೇಳಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ
Team Udayavani, Oct 7, 2019, 7:51 PM IST
ಚಿತ್ರದುರ್ಗ: ದಸರಾ ಹಬ್ಬಕ್ಕೆ ಸಂಬಳ ಕೊಡಲು ಸಾಧ್ಯವಾಗದ ಕಾರಣಕ್ಕೆ ಸಾರಿಗೆ ಇಲಾಖೆ ಚಾಲಕ, ನಿರ್ವಾಹಕರಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಕ್ಷಮೆ ಯಾಚಿಸಿದ್ದಾರೆ. ಶರಣ ಸಂಸ್ಕೃತಿ ಉತ್ಸವಕ್ಕಾಗಿ ಸೋಮವಾರ ಚಿತ್ರದುರ್ಗ ಮುರುಘಾ ಮಠಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಹಬ್ಬದ ಸಂದರ್ಭದಲ್ಲಿ ಮುಂಚಿತವಾಗಿ ಸಂಬಳ ಸಂದಾಯ ಮಾಡಬೇಕಿತ್ತು, ಆದರೆ ಸಾರಿಗೆ ನಿಗಮದಲ್ಲಿ ಹಣದ ಕೊರತೆಯಿಂದಾಗಿ ವೇತನ ಪಾವತಿಗೆ ತಡವಾಗಿದೆ. ಮುಖ್ಯವಾಗಿ ಹುಬ್ಬಳ್ಳಿ, ಕಲಬುರಗಿ ವಿಭಾಗದಲ್ಲಿ ಸಿಬ್ಬಂದಿ ವೇತನ ಪಾವತಿ ತಡವಾಗಿದೆ ಎಂದು ಸಚಿವರು ಹೇಳಿದ್ದಾರೆ. ಎಲ್ಲಾ ಸಿಬ್ಬಂದಿಗಳ ವೇತನವನ್ನು ಇದೇ ತಿಂಗಳ 9ಕ್ಕೆ ಪಾವತಿಸಲಾಗುವುದು ಎಂದೂ ಸಚಿವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವರನ್ನು ರಾಜ್ಯ ರಾಜಕಾರಣದಲ್ಲಿ ಮೂಲೆಗುಂಪು ಮಾಡುವ ಪ್ರಶ್ನೆಯೇ ಇಲ್ಲ ಎಂದು ಸವದಿ ಅವರು ಪತ್ರಕರ್ತರು ಕೇಳಿದ ಇನ್ನೊಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.