ಹಾಲಿನ ಆಮದಿಗೆ ಅವಕಾಶ ನೀಡದಂತೆ ಸಚಿವರ ಮನವಿ
Team Udayavani, Oct 9, 2019, 3:00 AM IST
ಬೆಂಗಳೂರು: “ಮುಕ್ತ ವ್ಯಾಪಾರ ಒಪ್ಪಂದದ ಪ್ರಕಾರ ಆರ್ಸಿಇಪಿ ಅಡಿಯಲ್ಲಿ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ದೇಶದ ಹೈನುಗಾರಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ’ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.
ಸೆಪ್ಟೆಂಬರ್ನಲ್ಲಿ ಬ್ಯಾಂಕಾಕ್ನಲ್ಲಿ ನಡೆದ ಆಗ್ನೇಯ ಏಷಿಯಾ ರಾಷ್ಟ್ರಗಳ (ಆಸಿಯಾನ್) 7ನೇ ಶೃಂಗ ಸಭೆಯಲ್ಲಿ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಪ್ರಸ್ತಾಪ ವಾಗಿದೆ. ನಮ್ಮ ದೇಶದಲ್ಲಿ ಆಸ್ಟ್ರೇಲಿಯಾ, ನ್ಯೂಜಿ ಲೆಂಡ್ ಹಾಗೂ ಯೂರೋಪ್ ಮಾದರಿಯ ಹೈನುಗಾರಿಕೆ ವ್ಯವಸ್ಥೆಯಿಲ್ಲ. ಭಾರತದಲ್ಲಿ ಕೃಷಿಕರು ಹಾಗೂ ಭೂ ರಹಿತ ಕಾರ್ಮಿಕರು ಹೈನುಗಾರಿಕೆಯನ್ನು ಆದಾಯದ ಮೂಲವಾಗಿ ಮಾಡಿಕೊಂಡಿದ್ದಾರೆ.
ಭಾರತದಲ್ಲಿ ಹಾಲು ಹಾಗೂ ಅದರಿಂದ ತಯಾರಾಗುವ ಉತ್ಪನ್ನಗಳನ್ನು ಹೆಚ್ಚು ಬಳಕೆ ಮಾಡುವುದರಿಂದ ನ್ಯೂಜಿಲೆಂಡ್ನಲ್ಲಿ ಉತ್ಪತ್ತಿಯಾಗುವ ಶೇ.93 ರಷ್ಟು ಹಾಲು ಹಾಗೂ ಅದರ ಉಪ ಉತ್ಪನ್ನಗಳನ್ನು ಭಾರತಕ್ಕೆ ರಪು¤ ಮಾಡುವ ಸಾಧ್ಯತೆ ಇದೆ. ಭಾರತ ನ್ಯೂಜಿಲೆಂಡ್ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಕೊಂಡರೆ ಮುಂದಿನ ದಿನಗಳಲ್ಲಿ ಯುರೋಪ್ ಹಾಗೂ ಅಮೆರಿಕ ದೇಶಗಳಿಗೂ ಮುಕ್ತ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವ ಸಂದರ್ಭ ಎದುರಾಗಬಹುದು.
ಆಗ ವಿದೇಶಗಳಿಂದ ಕಡಿಮೆ ಬೆಲೆಗೆ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ದೇಶ ಹಾಗೂ ಕರ್ನಾಟಕದ ಹೈನುಗಾರಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಆರ್ಸಿಇಪಿ ಮೂಲಕ ಹಾಲಿನ ಆಮದು ಮಾಡಿಕೊಳ್ಳುವ ವಿಷಯದಲ್ಲಿ ಮುತುವರ್ಜಿವಹಿಸಿ ನೀತಿ ರೂಪಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.