ಲಿಫ್ಟರ್ ವಿಶ್ವನಾಥ್‌ಗೆ ಸರಕಾರದ ಗೌರವ
ಉದ್ಯೋಗ, ಪುರಸ್ಕಾರಕ್ಕೆ ಪ್ರಯತ್ನ : ಸಚಿವ ಕೋಟ ಭರವಸೆ
Team Udayavani, Oct 8, 2019, 10:59 PM IST
ವಿಶ್ವನಾಥ್ ಗಾಣಿಗರನ್ನು ಸರಕಾರದ ಪರವಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮ್ಮಾನಿಸಿದರು.
ಕುಂದಾಪುರ: ಕೆನಡದಲ್ಲಿ ನಡೆದ ಕಾಮನ್‌ವೆಲ್ತ್ ಪವರ್ ಲಿಫ್ಟಿಂಗ್‌ನಲ್ಲಿ ಹೊಸ ದಾಖಲೆ ಜತೆ ತಲಾ 2 ಚಿನ್ನ, ಬೆಳ್ಳಿ ಪದಕಗಳ ಸಾಧನೆಯೊಂದಿಗೆ ರಾಜ್ಯಕ್ಕೆ ಕೀರ್ತಿ ತಂದಿತ್ತ ಕುಂದಾಪುರದ ದೇವಲ್ಕುಂದ ಗ್ರಾಮದ ವಿಶ್ವನಾಥ ಭಾಸ್ಕರ ಗಾಣಿಗ ಬಾಳಿಕೆರೆ ಅವರಿಗೆ ರಾಜ್ಯ ಸರಕಾರದಿಂದ ನಗದು ಪುರಸ್ಕಾರ, ಉದ್ಯೋಗ, ಮಾತ್ರವಲ್ಲದೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲು ಪ್ರಯತ್ನಿಸುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.
ಮಂಗಳವಾರ ವಿಶ್ವನಾಥ ಗಾಣಿಗರನ್ನು ಅವರ ಬಾಳಿಕೆರೆಯ ನಿವಾಸದಲ್ಲಿ ರಾಜ್ಯ ಸರಕಾರದ ಪರವಾಗಿ ಸಮ್ಮಾನಿಸಿ, ಗೌರವಿಸಿದ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪವರ್ ಲಿಫ್ಟಿಂಗ್‌ನಲ್ಲಿ ಉನ್ನತ ಸಾಧನೆ ಮಾಡಿ, ರಾಜ್ಯ ಮಾತ್ರವಲ್ಲದೆ ದೇಶಕ್ಕೆ ಹೆಸರು ತಂದುಕೊಟ್ಟ ವಿಶ್ವನಾಥ್ ಬಡ ಕುಟುಂಬದಿಂದ ಬಂದಿದ್ದಾರೆ. ಅವರ ಸಾಧನೆಗೆ ಪ್ರತಿಯಾಗಿ ಸರಕಾರದಿಂದ ನಗದು ಪುರಸ್ಕಾರ, ಉದ್ಯೋಗದ ಜತೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಲು ಪ್ರಯತ್ನಿಸುವೆ. ಇದಕ್ಕಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ತತ್‌ಕ್ಷಣ ಮುಖ್ಯಮಂತ್ರಿ ಯಡಿಯೂರಪ್ಪ, ಕ್ರೀಡಾ ಸಚಿವ ಈಶ್ವರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗುವುದು ಎಂದರು.
ಕ್ರೀಡಾ ಸಾಧಕನನ್ನು ಜಿಲ್ಲಾಡಳಿತ ನಿರ್ಲಕ್ಷಿಸಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾಡಳಿತ ಬೇರೆಯಲ್ಲ, ಸರಕಾರ ಬೇರೆಯಲ್ಲ. ಈಗ ಅವರನ್ನು ಸರಕಾರದ ಪ್ರತಿನಿಧಿಯಾಗಿ ಗೌರವಿಸಿದ್ದೇನೆ. ಸರಕಾರದಿಂದ ಎಲ್ಲ ರೀತಿಯ ಗೌರವ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದರು.
ಒಲಿಂಪಿಕ್ಸ್ ಅಲ್ಲದ ಇತರ ಕ್ರೀಡೆಗಳಲ್ಲಿಯೂ ಮಿಂಚುವ ಕ್ರೀಡಾಪಟುಗಳಿಗೂ ಹಿಂದೆ ಇದ್ದಂತೆ ರಾಜ್ಯದಲ್ಲಿ ಪ್ರಾಶಸ್ತ ನೀಡಬೇಕು ಎಂದು ವಿಶ್ವನಾಥ್ ಗಾಣಿಗ ಅವರು ಸಚಿವರಿಗೆ ಮನವಿ ಮಾಡಿದರು. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದರು.
ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್, ತಾ.ಪಂ. ಸದಸ್ಯ ಕರಣ್ ಪೂಜಾರಿ, ಗುಲ್ವಾಡಿ ಗ್ರಾ.ಪಂ. ಸದಸ್ಯ ಸುದೇಶ್ ಶೆಟ್ಟಿ ಕರ್ಕಿ, ಗಾಣಿಗ ಸಮಾಜದ ಪ್ರಮುಖರಾದ ಕೊಗ್ಗ ಗಾಣಿಗ, ಗಣೇಶ್ ಗಾಣಿಗ, ರವಿ ಗಾಣಿಗ, ನೆಂಪುವಿನ ಶ್ರೀ ವಿನಾಯಕ ಯುವಕ ಸಂಘದ ಸಂತೋಷ, ಮಂಜುನಾಥ, ಜಗದೀಶ್ ನೆಂಪು ಹಾಗೂ ಬಾಳಿಕೆರೆ ಗ್ರಾಮಸ್ಥರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್‌ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.