ಮೈಸೂರು ದಸರೆಗೆ ಸಂಭ್ರಮದ ತೆರೆ ; ಮನಸೂರೆಗೊಂಡ ಜಂಬೂಸವಾರಿ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ವಿಜಯ ದಶಮಿಯ ದಿನವಾದ ಮಂಗಳವಾರ ಲಕ್ಷಾಂತರ ಜನರ ಸಮ್ಮುಖದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಆಕರ್ಷಕ ಸ್ತಬ್ಧಚಿತ್ರಗಳು, ವಜ್ರಮುಷ್ಟಿ ಕಾಳಗ, ಪಂಜಿನ ಕವಾಯತು ಸಹಿತ ಹಲವಾರು ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡವು.