ಲಕ್ಕುಂಡಿ: ಸಂಭ್ರಮದ ವಿಜಯ ದಶಮಿ
Team Udayavani, Oct 9, 2019, 12:52 PM IST
ಗದಗ: ವಿಜಯದಶಮಿ ಅಂಗವಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದಂಡಿನ ದುರ್ಗಾದೇವಿ ಮೂರ್ತಿ ಮೆರವಣೆಗೆ ನಡೆಯಿತು.
ದೇವಿ ಭಾವಚಿತ್ರ ಹೊತ್ತ ಮೆರವಣೆಗೆ ವಾಹನ ವಿದ್ಯುತ್ ದೀಪಾಲಂಕರಗಳೊಂದಿಗೆ ಆಕರ್ಷಿಸಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದುರ್ಗಾದೇವಿ ಸೇವಾ ಸಮಿತಿ ಆಶ್ರಯದಲ್ಲಿ ವಿವಿಧ ವಾಧ್ಯ ಮೇಳಗಳು ಮೆರವಣೆಗೆಯಲ್ಲಿ ಭಾಗವಹಿಸಿದ್ದವು. ಇದರಲ್ಲಿ ರಾಜ ರಾಜೇಶ್ವರಿ ಹಾಗೂ ಅಕ್ಕಮಹಾದೇವಿ ಮಹಿಳಾ ಡೊಳ್ಳು ಕುಣಿತ ನೋಡುಗರನ್ನು ಆಕರ್ಷಿಸಿತು. ವಿಶೇಷವಾಗಿ ನವ ದುರ್ಗೆಯರ ವೇಷ ಭೂಷಣ ಗಮನ ಸೆಳೆಯಿತು. ಮೈಲಾರ ದೇವರ ಭಕ್ತರು ಬಾರಕೋಲಿನಿಂದ ಹೊಡೆದುಕೊಳ್ಳುವ ದೃಶ್ಯ ರೋಮಾಂಚನಗೊಳಿಸಿತು.
ಮೆರವಣೆಗೆ ಬಜಾರ ರಸ್ತೆ ಮೂಲಕ ಕಲ್ಮಠದವರೆಗೂ ನಡೆಯಿತು. ಅದೇ ರೀತಿ ಗ್ರಾಮ ದೇವತೆ ದ್ವಾಮವ್ವ ದೇವಿ ದಸರಾ ದರ್ಬಾರ್ ಗ್ರಾಮದ ಆಯ್ದ ಮನೆಗಳಲ್ಲಿ ಸಂಪ್ರದಾಯಿಕವಾಗಿ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಕೊರವರ ಓಣೆಯಲ್ಲಿ ಬನ್ನಿ ಮಹಾಂಕಾಳಿಗೆ ಪೂಜೆ ಸಲ್ಲಿಸಿದ ನಂತರ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವೀರೇಶ ಪತ್ತಾರ ಪಠಣ ಮಾಡಿದರು. ಬಸವರಾಜ ಹಡಗಲಿ, ಮಂಜುನಾಥ ಗರ್ಜಪ್ಪನವರ ಸಂಗೀತ ಸೇವೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.