ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಸೂಚನೆ


Team Udayavani, Oct 10, 2019, 3:00 AM IST

dosha-rahita

ದೇವನಹಳ್ಳಿ: ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಅಗತ್ಯ ಕ್ರಮಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ವೀಕ್ಷಕ ಅಂಜುಮ್‌ ಪರ್ವೇಜ್‌ ಸೂಚಿಸಿದರು.

ತಾಲೂಕಿನ ಚಪ್ಪರದ ಕಲ್ಲು ವೃತ್ತದ ಬಳಿ ಇರುವ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತದಾರರ ಪಟ್ಟಿ ತಯಾರಿಕೆ ಹಾಗೂ ಸಂಬಂಧಿತ ಕಾರ್ಯಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಮೂನೆ-6 ರಂತೆ 18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ನೊಂದಣಿ, ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಹೆಸರುಗಳ ಸೇರ್ಪಡೆ, ಮರಣ ಹೊಂದಿರುವವರ ವಿವರಗಳನ್ನು ತೆಗೆದು ಹಾಕುವಿಕೆ ಸೇರಿದಂತೆ ಮತದಾರರ ಪಟ್ಟಿಯಲ್ಲಿ ದೋಷಗಳಿದ್ದಲ್ಲಿ ಅದನ್ನು ಸರಿಪಡಿಸಿಕೊಳ್ಳಬೇಕು ಹಾಗೂ ನಕಲಿ ಗುರುತಿನ ಚೀಟಿಗಳು ತಯಾರಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಹೇಳಿದರು.

ಮತದಾರರ ಪಟ್ಟಿಯ ವಿವರಗಳನ್ನು ಪರಿಶೀಲನೆ ಮಾಡಲು ಆಯಾ ಗ್ರಾಮ ಪಂಚಾಯತಿಗಳಲ್ಲಿ ಬೂತ್‌ ಮಟ್ಟದ ಅಧಿಕಾರಿಗಳನ್ನು ನೇಮಿಸಲಾಗಿದೆ. ಯಾವುದೇ ಮತದಾರರು ಚುನಾವಣೆ ನಡೆಯುವ ಸಮಯದಲ್ಲಿ ಮತದಾನದಿಂದ ಹೊರಗುಳಿಯದೆ ಶೇ.100 ರಷ್ಟು ಮತದಾನವಾಗಲು ಹಾಗೂ ಪ್ರಾಮಾಣಿಕ ಮತ ಚಲಾವಣೆ ನಡೆಸಲು ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದು ಮತದಾರರ ಪಟ್ಟಿ ಪರಿಷ್ಕರಣೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಸಮಗ್ರ ಮತದಾರರ ಪಟ್ಟಿ ತಯಾರಿಕೆ ಹಾಗೂ ಪರಿಷ್ಕರಣೆ ಕುರಿತು ಚಿತ್ರಮಂದಿರ, ಅಂಗನವಾಡಿ ಮತ್ತು ಕಾಲೇಜ್‌ ಕ್ಯಾಂಪಸ್‌ ಸೇರಿದಂತೆ ಇನ್ನಿತರ ಸಮೂಹ ಸಂವಹನ ಮಾಧ್ಯಮದ ಮೂಲಕ ವ್ಯಾಪಕ ಪ್ರಚಾರ ಮಾಡಿ ಹಾಗೂ ಜಿಲ್ಲೆಯಲ್ಲಿ ಸ್ವೀಪ್‌ ಕಾರ್ಯಕ್ರಮ ಆಯೋಜಿಸುವ ಮೂಲಕ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ನಿರ್ದೇಶಿಸಿದರು.

ಚುನಾವಣಾ ಆಯೋಗದ ಸೂಚನೆಯಂತೆ ಬೂತ್‌ ಮಟ್ಟದ ಅಧಿಕಾರಿಗಳಿಗೆ ಅಗತ್ಯ ತರಬೇತಿ ನೀಡಿ. ಮತದಾನದ ಜಾಗೃತಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ ವಸ್ತುಗಳನ್ನು ಕಡ್ಡಾಯವಾಗಿ ಬಳಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಆಯಾ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿವರಗಳನ್ನು ಆಫ್‌ಲೈನ್‌ ಮತ್ತು ಆನ್‌ಲೈನ್‌ ಪರಿವೀಕ್ಷಣೆಯ ಸೌಲಭ್ಯ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ, ಸಿಇಒ ಎನ್‌.ಎಂ. ನಾಗರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ರು, ಪುರಸಭೆ, ನಗರಸಭೆಯ ಪೌರಯುಕ್ತರು ಮತ್ತು ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.