ಪಿಒಕೆ ಕುಟುಂಬಗಳಿಗೆ ಕೇಂದ್ರ ಸರಕಾರ ನೆರವು
Team Udayavani, Oct 10, 2019, 5:50 AM IST
ಹೊಸದಿಲ್ಲಿ: ಮಹತ್ವದ ಬೆಳವಣಿಗೆ ಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಿಂದ ಭಾರತಕ್ಕೆ ಆಗಮಿಸಿದ 5300 ಕುಟುಂಬಗಳಿಗೆ ತಲಾ 5.5 ಲಕ್ಷ ರೂ. ಪರಿಹಾರವನ್ನು ಒದಗಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ಸಭೆ ನಡೆದಿತ್ತು.
1947ರಲ್ಲಿ ದೇಶ ವಿಭಜನೆಯ ವೇಳೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಭಾರತಕ್ಕೆ ಆಗಮಿಸಿ ಜಮ್ಮುವಿನಲ್ಲಿ ನೆಲೆ ಕಂಡುಕೊಂಡ ಕುಟುಂಬಗಳಿಗೆ ಈ ಹಿಂದೆ 2016ರಲ್ಲಿ ಕೇಂದ್ರ ಸರಕಾರವು ಪರಿಹಾರ ನೀಡಿತ್ತು. ಆದರೆ ದೇಶದ ಇತರ ಭಾಗಗಳಲ್ಲಿ ನೆಲೆ ಕಂಡುಕೊಂಡವರಿಗೆ ಈ ಪರಿಹಾರ ಲಭ್ಯವಾಗಿರಲಿಲ್ಲ. ಜಮ್ಮುವಿನಲ್ಲಿ ಸುಮಾರು 26,319 ಕುಟುಂಬಗಳಿದ್ದರೆ, ದೇಶದ ಇತರ ಭಾಗಗಳಲ್ಲಿ ಒಟ್ಟು 5300 ಕುಟುಂಬಗಳಿವೆ. ಇದೆ ರೀತಿ 1965 ಮತ್ತು 1971ರ ಯುದ್ಧದ ಸಮಯದಲ್ಲೂ 10 ಸಾವಿರ ಕುಟುಂಬಗಳು ನಿರಾಶ್ರಿತವಾಗಿದ್ದವು.
ಅವಧಿ ವಿಸ್ತರಣೆ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರು ವಾರ್ಷಿಕ 6 ಸಾವಿರ ರೂ. ಸಹಾಯಧನ ಪಡೆಯುವುದಕ್ಕಾಗಿ ಆಧಾರ್ ಜೋಡಣೆ ಮಾಡಲು ನ.30ರ ವರೆಗೆ ಕಾಲಾವಕಾಶವನ್ನು ಸರಕಾರ ನೀಡಿದೆ. ಈ ಯೋಜನೆ ಅಡಿಯಲ್ಲಿ ಆಗಸ್ಟ್ 1 ರಿಂದಲೇ ಆಧಾರ್ ಜೋಡಣೆ ಕಡ್ಡಾಯ ವಾಗಿತ್ತು. ಆದರೆ ಈ ಅವಧಿಯನ್ನು ನವೆಂಬರ್ 30ರ ವರೆಗೆ ಕೇಂದ್ರ ಸರಕಾರ ಮುಂದೂಡಿದೆ. ಈಗಾಗಲೇ ಈ ಯೋಜನೆ ಅಡಿಯಲ್ಲಿ 7 ಕೋಟಿ ರೈತರಿಗೆ ಸಹಾಯ ಧನ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.