10 ದಿನಗಳ ಅಧಿವೇಶನಕ್ಕೆ 13 ಕೋಟಿ ಖರ್ಚು: ಅಭಿವೃದ್ಧಿ ಶೂನ್ಯ
ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ
Team Udayavani, Oct 10, 2019, 1:30 PM IST
ಬೆಳಗಾವಿ: ಕಳೆದ ವರ್ಷ ಸುವರ್ಣ ವಿಧಾನಸೌಧದಲ್ಲಿ ನಡೆದ ಹತ್ತು ದಿನಗಳ ಅಧಿವೇಶನಕ್ಕೆ ಒಟ್ಟು 13.85 ಕೋಟಿ ರೂ ವೆಚ್ಚ ಮಾಡಲಾಗಿದೆ. ಆದರೆ ಇದರಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಆರೋಪಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಧಿವೇಶನಕ್ಕೆ 13 ಕೋಟಿ ಖರ್ಚು ಮಾಡಿದ್ದರೂ ಈ ಸಮಯದಲ್ಲಿ ರೈತರ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ಯಾವುದೇ ಗಂಭೀರ ಚರ್ಚೆಗಳು ನಡೆದಿಲ್ಲ. ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾತ್ರ ಸಾರ್ವಜನಿಕ ರ ಹಣವನ್ನು ಪೋಲು ಮಾಡಿದ್ದಾರೆ ಎಂದು ದೂರಿದರು.
ಅಧಿವೇಶನದ ಸಮಯದಲ್ಲಿ ಶಾಸಕರು. ಅಧಿಕಾರಿಗಳು ಹಾಗೂ ಗಣ್ಯರ ವಸತಿಗಾಗಿ ನಗರದಲ್ಲಿರುವ 67 ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೊಠಡಿಗಳ ಬಾಡಿಗೆಗಾಗಿ ಜಿಲ್ಲಾಡಳಿತ 4.42 ಕೋಟಿ ವೆಚ್ಚ ಮಾಡಿದೆ. ಇದಲ್ಲದೆ ಅಧಿವೇಶನದ ಸಂದರ್ಭದಲ್ಲಿ ಊಟ ಹಾಗೂ ಉಪಹಾರಕ್ಕಾಗಿ 3 ಕೋಟಿ ರೂ ಹಾಗೂ ಸಚಿವಾಲಯದಿಂದ ಶಾಸಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪ್ರಯಾಣ ಮತ್ತು ದಿನಭತ್ಯೆಗಾಗಿ 2.61 ಕೋಟಿ ವೆಚ್ಚಮಾಡಲಾಗಿದೆ ಎಂದು ಭೀಮಪ್ಪ ಗಡಾದ ಹೇಳಿದರು. ಪ್ರತಿ ಬಾರಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನಕ್ಕೆ ಸರ್ಕಾರ ವೆಚ್ಚಮಾಡುವದನ್ನು ನೋಡಿದರೆ ಈ ಅಧಿವೇಶನ ಕೇವಲ ಸಾರ್ವಜನಿಕರ ತೆರಿಗೆ ಹಣ ನುಂಗುವ ಅಧಿವೇಶನ ಆಗುತ್ತಿದೆ ಎಂದು ಗಡಾದ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.