“ಉದಯವಾಣಿ’ಯ ವರದಿಗಾರ ಸುಭಾಶ್ಚಂದ್ರ ಕೆದೂರು ನಿಧನ
Team Udayavani, Oct 11, 2019, 11:03 AM IST
ಉಡುಪಿ: “ಉದಯವಾಣಿ’ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಭಾಶ್ಚಂದ್ರ ಕೆದೂರು (42) ಅವರು ಅ. 10ರಂದು ಇಲ್ಲಿ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿಯಾದ ಕುಂದಾಪುರ ತಾಲೂಕು ಕೆದೂರು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಗೀತಾ, ತಾಯಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೊದಲು ಎಲೆಕ್ಟ್ರೀಶಿಯನ್ ಆಗಿದ್ದ ಅವರು ಬೆಂಗಳೂರಿನಲ್ಲಿ ಹೊಟೇಲ್ ಉದ್ಯೋಗಿಯಾಗಿ ಪತ್ರಿಕೋದ್ಯಮ ಕೋರ್ಸ್ ಓದಿದ್ದರು. ಕೆಲ ಕಾಲ ಬೆಂಗಳೂರಿನ ಸ್ಥಳೀಯ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದ ಅವರು ಬಳಿಕ ರಾಜ್ಯ ಮಟ್ಟದ ಪತ್ರಿ ಕೆ ಯಲ್ಲಿ ವರದಿಗಾರರಾಗಿದ್ದರು. ನಾಟಕ ರಚನೆ, ನಿರ್ದೇಶನದಲ್ಲಿಯೂ ಪ್ರತಿಭೆ ಹೊಂದಿದ್ದರು. ಸ್ಥಳೀಯವಾಗಿ ನಡೆಯುತ್ತಿದ್ದ ಗಣೇಶೋತ್ಸವ ಮೊದಲಾದ ಕಾರ್ಯಕ್ರಮಗಳಲ್ಲಿ ತಾನೇ ನಾಟಕ ರಚಿಸಿ ನಿರ್ದೇಶನ ನೀಡುತ್ತಿದ್ದರು. ಯಕ್ಷಗಾನ ರಂಗ ದಲ್ಲೂ ಆಸ ಕ್ತಿ ಹೊಂದಿದ್ದ ಅವರು, ಪ್ರಸಂಗ ರಚಿಸಿ ನಿರ್ದೇಶನ ನೀಡುತ್ತಿದ್ದರು. ಯಕ್ಷಗಾನದ ಪಾತ್ರಗಳನ್ನೂ ನಿರ್ವಹಿಸಿದ್ದರು.
“ಉದಯವಾಣಿ’ಯ ಉಡುಪಿ ಮತ್ತು ಮಣಿಪಾಲ ಕಚೇರಿಯಲ್ಲಿ 2005ರಿಂದ 2015ರವರೆಗೆ ಉಪಸಂಪಾದಕ ಹಾಗೂ ವರದಿಗಾರರಾಗಿ ಸೇವೆ ಸಲ್ಲಿಸಿದ ಅವರಿಗೆ ಬಳಿಕ ಅಸೌಖ್ಯ ಉಂಟಾಯಿತು. ಮೂರು ವರ್ಷಗಳಿಂದ ಚಿಕಿತ್ಸೆಯಲ್ಲಿದ್ದ ಅವರು ಹಠಾತ್ ಆಗಿ ಹೃದಯಾಘಾತದಿಂದ ನಿಧನ ಹೊಂದಿದರು.
ಅವರು ವಿಶೇಷ ಸುದ್ದಿ, ಗ್ರಾಮೀಣ ಭಾಗದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ವರದಿ, ಮಾರುಕಟ್ಟೆ ಆಧಾರಿತ ಸುದ್ದಿಗಳನ್ನು ಸಿದ್ಧಪಡಿಸುವಲ್ಲಿ ಪರಿಣಿತರಾಗಿದ್ದರು.
ಗುರುವಾರ ಕೆದೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿತು. ಉಡುಪಿ, ಕುಂದಾಪುರ, ಬ್ರಹ್ಮಾವರ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.