ಗುರುಮಠಕಲ್‌ನಲ್ಲಿ ವಿಪರೀತ ಸೊಳ್ಳೆ ಕಾಟ
ಸರ್ಕಾರಿ-ಖಾಸಗಿ ಕಚೇರಿಯಲ್ಲಿ ಹಾವಳಿನಿಯಂತ್ರಣಕ್ಕೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ
Team Udayavani, Oct 11, 2019, 1:12 PM IST
ಚೆನ್ನಕೇಶವುಲು ಗೌಡ
ಗುರುಮಠಕಲ್: ಪಟ್ಟಣದಲ್ಲಿ ಹೆಚ್ಚುತ್ತಿರುವ ಸೊಳ್ಳೆಗಳು. ನಿಯಂತ್ರಣಕ್ಕೆ ಮುಂದಾಗದ ಪುರಸಭೆ ಅಧಿಕಾರಿಗಳು.
ಪಟ್ಟಣದಲ್ಲಿ ಪ್ರತಿ ದಿನ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿವೆ. ಸೊಳ್ಳೆಗಳನ್ನು ನಿಯಂತ್ರಿಸಲು ಪುರಸಭೆ ಅಧಿಕಾರಿಗಳು ಫಾಗಿಂಗ್ ಬಳಸುತ್ತಿಲ್ಲ. ಕೆಲ ವರ್ಷಗಳ ಹಿಂದೆ ಪ್ರತಿ ಮನೆಗೂ ಬಂದು ಔಷಧಿ ಸಿಂಪಡಿಸುತ್ತಿದ್ದರು. ಈಗ ಪುರಸಭೆ ಯಾವುದೇ ಔಷಧಿ ಸಿಂಪಡಿಸುತ್ತಿಲ್ಲ. ಇದರಿಂದ ವಾರ್ಡ್‌ಗಳಲ್ಲಿನ ಜನರಿಗೆ ಡೆಂಘೀ ಜ್ವರದ ಭೀತಿ ಎದುರಾಗಿದೆ. ಜನರು ಭಯಭೀತರಾಗಿದ್ದಾರೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳು ಹಿಂಡು ಹಿಂಡಾಗಿ ಮನೆಗಳಿಗೆ ದಾಳಿ ಇಡುತ್ತಿವೆ. ಪುರಸಭೆ ವತಿಯಿಂದ ಪ್ರತಿ ವಾರ್ಡ್ಗಳಲ್ಲಿ ದಿನನಿತ್ಯ ಎರಡು ಸಮಯದಲ್ಲಿ ಫಾಗಿಂಗ್ ಮತ್ತು ಇತರ ಸೊಳ್ಳೆ ನಿಯಂತ್ರಣಕ್ಕೆ ಔಷಧಿ ಸಿಂಪಡಿಸುವಂತೆ ಸಾರ್ವಜನಿಕರು ಮನವಿ
ಮಾಡಿದ್ದಾರೆ.
ಪಟ್ಟಣದ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಯಲ್ಲಿ ಸೊಳ್ಳೆ ಹಾವಳಿ ವಿಪರೀತವಾಗಿದೆ. ಹಿಂದೆಲ್ಲ ಸಂಜೆಯಾದರೆ ಹೆಚ್ಚು
ಕಾಣಿಸುತ್ತಿದ್ದ ಸೊಳ್ಳೆ ಹಾವಳಿ ಈಗ ಬೆಳಗಿನಿಂದಲೇ ಕಾಟ ಜೋರಾಗಿದೆ. ಇದರಿಂದಾಗಿ ಕೆಲಸ ಮಾಡಲು ತೊಂದರೆಯಾಗುತ್ತಿದೆ. ಇದರ ನಿಯಂತ್ರಣ ಕಷ್ಟ ಸಾಧ್ಯವಾಗಿದ್ದು, ದಿನನಿತ್ಯ ಕಚೇರಿಯಲ್ಲಿ ಫ್ಯಾನ್ ತಿರುಗುತ್ತಲೇ ಇರಬೇಕಿದೆ. ವಿದ್ಯುತ್
ವ್ಯತ್ಯಯವಾದರಂತೂ ದೇವರೇ ಗತಿ. ಸೊಳ್ಳೆಗಳು ಕಚೇರಿ ಉದ್ಯೋಗಿಗಳ ರಕ್ತ ಹೀರುವುದರ ಜತೆಗೆ ಹಲವು ಕಾಯಿಲೆಗೆ ಕಾರಣವಾಗಿವೆ.
ಈಗಾಗಲೇ ಹಲವು ಮಂದಿ ವಿವಿಧ ರೀತಿಯ ಕಾಯಿಲೆಗೆ ತುತ್ತಾಗುತ್ತಿದ್ದು, ಜ್ವರ ತಲೆನೋವು ಸಾಮಾನ್ಯವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಸೊಳ್ಳೆ ನಿಯಂತ್ರಣಕ್ಕೆ ಆದಷ್ಟು ಶೀಘ್ರವಾಗಿ ಪರಿಹಾರ ಹಾಗೂ ನಿಯಂತ್ರಣ ಕ್ರಮಕ್ಕೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.