ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಿಂದ ಸಿಎಂ ಪರಿಹಾರ ನಿಧಿಗೆ 1 ಕೋ ರೂ ದೇಣಿಗೆ ಸಲ್ಲಿಕೆ
Team Udayavani, Oct 11, 2019, 5:20 PM IST
ಕಲಬುರಗಿ: ಇಲ್ಲಿನ ಶರಣಬಸವ ವಿಶ್ವವಿದ್ಯಾಲಯ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಂದ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋ ರೂ ಪರಿಹಾರ ಚೆಕ್ ನ್ನು ಸಲ್ಲಿಸಲಾಯಿತು.
ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ರು ಹಾಗೂ ಶರಣಬಸವ ವಿಶ್ವವಿದ್ಯಾಲಯ ದ ಕುಲಾಧಿಪತಿಗಳಾದ ಡಾ. ಶರಣಬಸವಪ್ಪ ಅಪ್ಪ ಅವರು ಕಳೆಸ ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಬಂದ ಸಂದರ್ಭದಲ್ಲಿ ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರ ದಲ್ಲಿನಡೆದ ಕಾರ್ಯಕ್ರಮ ದಲ್ಲಿ ಡಾ.ಅಪ್ಪಾಜಿ ಅವರು ಸಿಎಂ ಸಮ್ಮುಖದಲ್ಲಿ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 1 ಕೋ ರೂ ಪರಿಹಾರ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 1 ಕೋ ರೂ ಮೊತ್ತದ ಚೆಕ್ ನ್ನು ನೀಡಿದರು.
ಈ ಸಂದರ್ಭದಲ್ಲಿ ಶರಣಬಸವ ವಿವಿಯ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಶರಣಬಸವೇಶ್ವರರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸುರೇಶ ನಂದಗಾಂವ, ಜಿಲ್ಲೆಯ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ರಾಜಕುಮಾರ ಪಾಟೀಲ್ ತೇಲ್ಕೂರ, ಬಸವರಾಜ ಮತ್ತಿಮಡು, ಬಿ.ಜಿ.ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.
ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಈ ಸಂದರ್ಭದಲ್ಲಿ ಮಾತನಾಡಿ, ಡಾ. ಶರಣಬಸವಪ್ಪ ಅಪ್ಪ ಅವರು ಘೋಷಣೆ ಮಾಡಿರುವಂತೆ ಪರಿಹಾರ ನಿಧಿ ಗೆ ಚೆಕ್ ಸಲ್ಲಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.