ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮೂವರು ಗಣ್ಯರ ಆಯ್ಕೆ
Team Udayavani, Oct 12, 2019, 3:03 AM IST
ಬೆಂಗಳೂರು: ಪರಿಶಿಷ್ಟ ಜನಾಂಗದ ಶ್ರೇಯೋಭಿವೃದ್ಧಿ ಗಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಮೂವರು ಗಣ್ಯರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದರು.
ವಿಧಾನಸೌಧದಲ್ಲಿ ಶುಕ್ರ ವಾರ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಓಬಳಪ್ಪ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ.ರಂಗಯ್ಯ ಅವರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ವಿಶ್ರಾಂತ ಕುಲಪತಿಗಳು ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ನಿರಂಜನ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಈ ಮೂವರು ಗಣ್ಯರನ್ನು ಆಯ್ಕೆ ಮಾಡಿ, ವರದಿ ನೀಡಿದ್ದು, ಸರ್ಕಾರ ಈ ವರದಿಯನ್ನು ಅಂಗೀಕರಿಸಿದೆ. ರಾಜ್ಯಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅಕ್ಟೋಬರ್ 13ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಈ ಸಮಾರಂಭದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಲಾ ಗುವುದು. ಪ್ರಶಸ್ತಿ ತಲಾ 20 ಗ್ರಾಂ ಚಿನ್ನದ ಪದಕ ಹಾಗೂ 5 ಲಕ್ಷ ರೂ.ನಗದನ್ನು ಒಳಗೊಂಡಿದೆ ಎಂದರು. ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್ ಉಪಸ್ಥಿತರಿದ್ದರು.
ಪ್ರಶಸ್ತಿ ಪುರಸ್ಕೃತರ ವಿವರ
ಡಾ.ಕಮಲಾ ಹಂಪನಾ: ಹಿರಿಯ ಮಹಿಳಾ ಸಾಹಿತಿ ಯಾಗಿದ್ದು, ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಓಬಳಪ್ಪ: ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿ ಕಾರಿಯಾಗಿ ಹಾಗೂ ಹರಿಹರದ ವಾಲ್ಮೀಕಿ ಹಾಸ್ಟಲ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾಜದ ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.
ಡಾ.ಜಿ.ರಂಗಯ್ಯ: ನರರೋಗ ತಜ್ಞರಾಗಿದ್ದಾರೆ. ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಅಮೆರಿಕದ ಇಂಡಿಯನ್ ನ್ಯೂರಾಲಜಿಸ್ಟ್ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿ ಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಯಾರ್ಕ್ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ರಾಷ್ಟದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.