ನೆಮ್ಮದಿಗೆ ಯೋಗ, ಧ್ಯಾನ ಸಹಕಾರಿ: ನೂರುನ್ನೀಸಾ
ಮಾನಸಿಕ ಆರೋಗ್ಯ ದಿನಾಚರಣೆ
Team Udayavani, Oct 12, 2019, 5:43 AM IST
ಮಡಿಕೇರಿ: ಪ್ರತಿಯೊಬ್ಬರೂ ಯೋಗ, ಧ್ಯಾನ, ಪ್ರಾರ್ಥನೆ ಮಾಡುವುದರಿಂದ ಮಾನಸಿಕವಾಗಿ ನೆಮ್ಮದಿಯಾಗಿರಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗ್ರೀನ್ ಡಾಟ್ ಟ್ರಸ್ಟ್, ಶಕ್ತಿಧಾಮ, ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ಹಾಗೂ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಗುರುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವೈದ್ಯ ಡಾ.ರೂಪೇಶ್ ಗೋಪಾಲ್ ಅವರು ಮಾತನಾಡಿ ವರ್ಷದಿಂದ ವರ್ಷಕ್ಕೆ ಆತ್ಮಹತ್ಯೆಗೆ ತುತ್ತಾಗುತ್ತಾರೆ. ಆತ್ಮಹತ್ಯೆಗೆ ಹಲವು ಕಾರಣಗಳಿದ್ದು, ಅವುಗಳಲ್ಲಿ ಕೆಲಸದಲ್ಲಿ ಒತ್ತಡ, ಸಾಲ ಮಾಡಿಕೊಂಡಿರುವುದು, ಕೌಟುಂಬಿಕ ಕಲಹ, ಖನ್ನತೆ, ದೈಹಿಕ ಸಮಸ್ಯೆ ಮತ್ತಿತರವು ಕಾರಣವಾಗಿದೆ ಎಂದು ಅವರು ತಿಳಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ವೈ.ಚಿತ್ರಾ ಪ್ರಾಧ್ಯಾಪಕಿ ಕನ್ನಿಕಾ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಎಂ.ಶಿವಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯರಾದ ಡಾ.ಡೆವಿಲ್ ಲಿನೇಕರ್ ಕರ್ಕಡ, ಮಾನಸದಾರ ಸಂಸ್ಥೆ ವ್ಯವಸ್ಥಾಪಕ ವಿಶ್ವನಾಥ್‌ಉಪಸ್ಥಿತರಿದ್ದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ಕಾರ್ಯಪ್ಪ ನಿರೂಪಿಸಿದರು. ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ಸಂಯೋಜಕರಾದ ಡಿ.ಸಿ.ತೇಜಸ್ ಅವರು ಸ್ವಾಗತಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರಾರ್ಥಿಸಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕದ ಮನಃಶಾಸ್ತ್ರಜ್ಞ .ಟಿ.ರಾಜಶೇಖರ್ ಅವರು ವಂದಿಸಿದರು. ದಿನಾಚರಣೆಯ ಅಂಗವಾಗಿ ಜಾಥಾಗ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.