ಹಂಪಿ ಸ್ಮಾರಕಗಳಿಗೆ ಕ್ಯಾಮೆರಾ ಕಣ್ಗಾವಲು
ಸ್ಮಾರಕಗಳ ಹಾನಿ ಹೆಚ್ಚಳ ಹಿನ್ನೆಲೆಯಲ್ಲಿ ಕಠಿಣ ಕ್ರಮ, ಸರ್ವೆಲೆನ್ಸ್ ಕ್ಯಾಮೆರಾ ಅಳವಡಿಸಲು ನಿರ್ಧಾರ
Team Udayavani, Oct 12, 2019, 11:00 AM IST
ಪಿ. ಸತ್ಯನಾರಾಯಣ
ಹೊಸಪೇಟೆ: ದೇಶ-ವಿದೇಶಿಯರನ್ನು ತನ್ನತ್ತ ಸೆಳೆಯುವ ಐತಿಹಾಸಿಕ ಹಂಪಿಯ ಸ್ಮಾರಕಗಳ ರಕ್ಷಣೆಗೆ ಜಿಲ್ಲಾಡಳಿತ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು, ಅತ್ಯಾಧುನಿಕ ಸರ್ವೆಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲು ಸಜ್ಜಾಗಿದೆ.
ಕಳೆದ ಕೆಲ ವರ್ಷಗಳಿಂದ ಸೂಕ್ತ ರಕ್ಷಣೆ ಇಲ್ಲದೆ ಸ್ಮಾರಕಗಳಿಗೆ ಧಕ್ಕೆಯಾಗುತ್ತಿವೆ. ಕಿಡಿಗೇಡಿಗಳು ಸ್ಮಾರಕಗಳನ್ನು ಹಾನಿ ಮಾಡುವ ಪ್ರಕರಣಗಳು ಹೆಚ್ಚುತ್ತಲೇ ಇವೆ. ಹೀಗಾಗಿ ಐತಿಹಾಸಿಕ ಸ್ಮಾರಕಗಳ ರಕ್ಷಣೆಯ ಕಣ್ಗಾವಲಿಗೆ ಅತ್ಯಾಧುನಿಕ ಸರ್ವೆಲೆನ್ಸ್ ಕ್ಯಾಮೆರಾಗಳನ್ನು ಅಳವಡಿಸಲು ಎರಡು ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ.
ಐತಿಹಾಸಿಕ ಹಂಪಿಯ ಪ್ರಮುಖ ಹದಿನೆಂಟು ಸ್ಮಾರಕಗಳ ಬಳಿ ಈ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ಸಲಹೆ ಮೇರೆಗೆ ಈ ಕ್ಯಾಮೆರಾಗಳ ಕಣ್ಗಾವಲು ಕಾರ್ಯಾರಂಭ ಮಾಡಲಾಗುತ್ತಿದೆ. ಕ್ಯಾಮೆರಾ ಸೆರೆ ಹಿಡಿಯುವ ಚಿತ್ರಗಳ ವೀಕ್ಷಣೆಯ ವ್ಯವಸ್ಥೆಯನ್ನೂ ಜಿಲ್ಲಾ ಪೊಲೀಸ್ ಇಲಾಖೆ ಮಾಡಲಿದೆ. ದೇಶ-ವಿದೇಶಗಳಿಂದ ಹಂಪಿಗೆ ಭೇಟಿ ನೀಡಲಿರುವ ಪ್ರವಾಸಿಗರು ಸ್ಮಾರಕಗಳಿಗೆ ಯಾವುದೇ ರೀತಿಯ ಧಕ್ಕೆಯುಂಟು ಮಾಡದೇ ಇರುವುದನ್ನು ತಡೆಯಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.
ಈಗಾಗಲೇ ಕಳೆದ ಕೆಲ ವರ್ಷಗಳಿಂದ ಹಂಪಿಯ ಸ್ಮಾರಕಗಳ ಬಳಿ ಸಿಸಿ ಕ್ಯಾಮೆರಾ ಆಳವಡಿಕೆ ಮಾಡಿದ್ದರೂ ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಕ್ಯಾಮೆರಾಗಳು ಹಾಳಾಗಿದ್ದವು. ಆದರೆ, ಈಗ ಸಮರ್ಪಕವಾಗಿ ನಿರ್ವಹಣೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ.
ಆ ಮೂಲಕ ಹಂಪಿಯ ಪ್ರತಿಯೊಂದು ಸ್ಮಾರಕಗಳ ರಕ್ಷಣೆಗೆ ಕಣ್ಗಾವಲು ಇಡಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.