ಕೇಂದ್ರ, ರಾಜ್ಯ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸಿ


Team Udayavani, Oct 13, 2019, 3:00 AM IST

kendra-rajya

ದೇವನಹಳ್ಳಿ: ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ, ಪ್ರತಿ ಗ್ರಾಮದಲ್ಲೂ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಚ್‌.ಎಂ.ರವಿಕುಮಾರ್‌ ತಿಳಿಸಿದರು. ತಾಲೂಕಿನ ಲಕ್ಷ್ಮೀಪುರ ಶ್ರೀಆಂಜನೇಯಸ್ವಾಮಿ ದೇವಾಲಯ ಆವರಣದಲ್ಲಿ ನಡೆದ ಬಿಜೆಪಿ ಆವತಿ ಶಕ್ತಿ ಕೇಂದ್ರದ ಬೂತ್‌ ಮಟ್ಟದ ಕಮಿಟಿ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಪಕ್ಷದ ಸದಸ್ಯರನ್ನಾಗಿ ಮಾಡಲು ಶ್ರಮಿಸಲಾಗುತ್ತಿದೆ. ಆವತಿ ಶಕ್ತಿ ಕೇಂದ್ರದ ಮುಖಂಡರ ಸಭೆ ಕರೆದು ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂಬುವುದರ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಉತ್ತಮ ಯೋಜನೆಗಳನ್ನು ರೂಪಿಸಿ ಮಾದರಿ ಆಡಳಿತ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಜನರ ಕಲ್ಯಾಣಕ್ಕೆ ಯೋಜನೆಗಳನ್ನು ರೂಪಿಸುತ್ತಿದೆ. ಆವತಿ ಶಕ್ತಿ ಕೇಂದ್ರದ ಬಿಜೆಪಿ ಮಟ್ಟದ ಸಭೆಯಲ್ಲಿ ಮುಖಂಡರ ಸಮ್ಮೂಖದಲ್ಲಿ ಮಂಡಲ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಹೆಸರು ನೋಂದಣಿಯ ಸದಸ್ಯರ ಪಟ್ಟಿಯನ್ನು 15ನೇ ತಾರೀಖೀನ ಒಳಗಾಗಿ ಸಲ್ಲಿಸಬೇಕಾಗುತ್ತದೆ ಎಂದು ಚರ್ಚಿಸಲಾಗಿದೆ ಎಂದರು.

ಬೆಂ.ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ದೇವನಹಳ್ಳಿಯ ಪುಷ್ಪ ಶಿವಶಂಕರ್‌ ಅವರನ್ನು ನೇಮಕ ಮಾಡಿರುವುದರಿಂದ ಮಂಗಳವಾರದಂದು ಕೊಯಿರ, ವಿಶ್ವನಾಥಪುರ, ಬಿದಲೂರು, ಕಾರಹಳ್ಳಿ, ಆವತಿ ಗ್ರಾ.ಪಂಚಾಯಿತಿಗೆ ಭೇಟಿ ನೀಡಲಿದ್ದು, ಈ ವ್ಯಾಪ್ತಿಯ ಶಕ್ತಿ ಕೇಂದ್ರಗಳ ಕಮಿಟಿಯ ಸದಸ್ಯರ ಪಟ್ಟಿಯನ್ನು ಹಸ್ತಾಂತರಿಸಬೇಕಾಗುತ್ತದೆ. ಮಂಡಲ ಪಟ್ಟಿ ಹಾಗೂ ಸದಸ್ಯರ ಪಟ್ಟಿ ನೊಂದಣಿ ಕಾರ್ಯ ಮುಕ್ತಾಯಗೊಂಡ ನಂತರ ಮಂಡಲ ಅಧ್ಯಕ್ಷರ ಆಯ್ಕೆ ಚುನಾವಣೆ ನಡೆಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ತಾಲೂಕಿನಾದ್ಯಂತ ಗಾಂಧಿ ಜಯಂತಿಯ 150ನೇ ವರ್ಷದ ಅಂಗವಾಗಿ ತಾಲೂಕಿನಾದ್ಯಂತ ಪಾದಯಾತ್ರೆ ಮೂಲಕ ಸಾರ್ವಜನಿಕ ಸ್ವತ್ಛತೆಯ ಅರಿವು ಹಾಗೂ ಪ್ಲಾಸ್ಟಿಕ್‌ ಬಳಕೆ ನಿಷೇಧದ ಬಗ್ಗೆ ಜಾಥ ಮಾಡಲಾಗುವುದು. ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಈ ವೇಳೆ ತಾಲೂಕು ಪ್ರಧಾನ ಕಾರ್ಯದರ್ಶಿ ಸುನೀಲ್‌, ಬಿಎಲ್‌ಎಚ್‌ಒ ಶಿವಪ್ರಸಾದ್‌, ಆವತಿ ಶಕ್ತಿ ಕೇಂದ್ರದ ಕಾರ್ಯದರ್ಶಿ ರಮೇಶ್‌, ಹಿರಿಯ ಮುಖಂಡ ಕೆಂಪಣ್ಣ, ಬಿಜೆಪಿ ಮುಖಂಡರಾದ ನಾಗರಾಜ್‌, ಯುವ ಮೋರ್ಚಾ ತಾಲೂಕು ಉಪಾಧ್ಯಕ್ಷ ಹರ್ಷವರ್ಧನ, ಆವತಿ ಸುರೇಶ್‌, ರಾಮಾಂಜಿನಪ್ಪ, ಮುಖಂಡರುಗಳು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.